22,400 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ಮೆಟ್ರೋ ರೈಲು ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾನ ಆರ್ಥಿಕ ಹೊಣೆಗಾರಿಕೆ ಹಂಚಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಬೇಕು. ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡುವುದರ ಜತೆಗೆ ನಿರ್ಮಾಣ ವೆಚ್ಚ ಹಾಗೂ ವಿಳಂಬದಿAದ ಉಂಟಾಗುವ ಹೆಚ್ಚುವರಿ ಹೊರೆಯನ್ನೂ ನ್ಯಾಯಯುತವಾಗಿ ಹಂಚಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಬೆಂಗಳೂರಿನ ಪಿಂಕ್ ಲೈನ್ ಮೆಟ್ರೋ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ವರ್ಷಗಳಲ್ಲಿ ಬೆಂಗಳೂರಿನ ಮೆಟ್ರೋ ಜಾಲವನ್ನು 500 ಕಿ.ಮೀ.ಗೆ ವಿಸ್ತರಿಸುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಘೋಷಿಸಿದರು. ಇದೇ ಸಂದರ್ಭದಲ್ಲಿ ಕರ್ನಾಟಕದ ಬರ ಪರಿಸ್ಥಿತಿ, ರೈತರ ಬೆಳೆ ನಷ್ಟ ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪ್ರಧಾನಮಂತ್ರಿಯವರ ಗಮನಕ್ಕೆ ತಂದರು.

ಬೆAಗಳೂರು ಮೆಟ್ರೋ ಯೋಜನೆಯಲ್ಲಿ ಭೂಸ್ವಾಧೀನ, ಉಪಯುಕ್ತ ಸೇವೆಗಳ ಸ್ಥಳಾಂತರ, ತೆರಿಗೆ ಪಾವತಿ, ವಿದೇಶಿ ಸಾಲದ ಮರುಪಾವತಿ ಸೇರಿದಂತೆ ಹಲವು ಆರ್ಥಿಕ ಹೊರೆಗಳನ್ನು ರಾಜ್ಯ ಸರ್ಕಾರವೇ ಹೆಚ್ಚಾಗಿ ಭರಿಸುತ್ತಿದೆ. ಆದರೆ ಮೆಟ್ರೋ ಯೋಜನೆಯ ಪ್ರಯೋಜನವನ್ನು ಕೇಂದ್ರ ಮತ್ತು ರಾಜ್ಯದ ಜನರು ಸಮಾನವಾಗಿ ಪಡೆಯುತ್ತಾರೆ. ಹೀಗಾಗಿ ಯೋಜನೆಯ ವೆಚ್ಚದ ಹೊಣೆಯೂ ನ್ಯಾಯಯುತವಾಗಿ ಹಂಚಿಕೆಯಾಗಬೇಕು ಎಂದು ಪ್ರತಿಪಾದಿಸಿದರು.

ಬೆಂಗಳೂರಿನ ಮೆಟ್ರೋ ಜಾಲ 100 ಕಿ.ಮೀ. ಗಡಿ ದಾಟಿರುವುದು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮೆಟ್ರೋ ಯೋಜನೆಗಳ ಅನುಮೋದನೆ ಮತ್ತು ನಿರ್ಮಾಣದಲ್ಲಿ ಆಗುತ್ತಿರುವ ವಿಳಂಬ ನಿವಾರಣೆಗೆ ಕಾಲಮಿತಿ ನಿಗದಿಪಡಿಸಬೇಕು. ಯೋಜನಾ ವೆಚ್ಚವನ್ನು ಪ್ರಸ್ತುತ ಮಾರುಕಟ್ಟೆ ದರಗಳಿಗೆ ಅನುಗುಣವಾಗಿ ಪರಿಗಣಿಸಬೇಕು ಎಂದು ಅವರು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಮೆಟ್ರೋ ಕಾರ್ಯಾಚರಣೆಯಲ್ಲಿನ ನಷ್ಟ ಹಾಗೂ ವಿದೇಶಿ ಸಾಲದ ವಿನಿಮಯ ದರದ ಅಪಾಯವನ್ನೂ ಹಂಚಿಕೊಳ್ಳಬೇಕು. ಕೈಗೆಟುಕುವ ದೀರ್ಘಾವಧಿ ಸಾಲ ಒದಗಿಸಲು ರಾಷ್ಟಿçÃಯ ಹಣಕಾಸು ಸಂಸ್ಥೆಗಳ ಮೂಲಕ ವ್ಯವಸ್ಥೆ ರೂಪಿಸಬೇಕು. ದೇಶದ ಎಲ್ಲ ಮೆಟ್ರೋ ನಗರಗಳಿಗೆ ಅನುಕೂಲವಾಗುವಂತೆ ಪ್ರತ್ಯೇಕ ರಾಷ್ಟಿçÃಯ ತಾಂತ್ರಿಕ ಸಂಸ್ಥೆ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಕಬ್ಬಿಗೆ 5,500 ಬೆಂಬಲ ಬೆಲೆಗೆ ಆಗ್ರಹ:

ಕಬ್ಬು ಬೆಳೆಗಾರರ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ ಮುಖ್ಯಮಂತ್ರಿ, 2026-27ನೇ ಸಾಲಿಗೆ ಪ್ರತಿ ಟನ್ ಕಬ್ಬಿಗೆ ?3,650 ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ ನಿಗದಿಪಡಿಸಲಾಗಿದೆ. ಆದರೆ ರೈತರು ಪ್ರತಿ ಟನ್‌ಗೆ ?5,500 ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದರು.

2019ರಿAದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಪ್ರತಿ ಕೆ.ಜಿ.ಗೆ ?31ರಲ್ಲೇ ಸ್ಥಿರವಾಗಿದೆ. ಇದನ್ನು ಪರಿಷ್ಕರಿಸುವುದರ ಜತೆಗೆ ಕರ್ನಾಟಕಕ್ಕೆ ಎಥೆನಾಲ್ ಹಂಚಿಕೆಯಲ್ಲಿ ನ್ಯಾಯಯುತ ಪಾಲು ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕದ ಸಾಧನೆಗಳ ಉಲ್ಲೇಖ:

ಕರ್ನಾಟಕವು ಕೈಗಾರಿಕೆ, ವಿಜ್ಞಾನ, ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ದೇಶಕ್ಕೆ ಮಹತ್ವದ ಕೊಡುಗೆ ನೀಡಿದೆ. ಬೆಂಗಳೂರಿನಲ್ಲಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ, ಚಿಪ್ ವಿನ್ಯಾಸ ಹಾಗೂ ಸ್ಟಾರ್ಟ್ಅಪ್ ಕ್ಷೇತ್ರಗಳು ವೇಗವಾಗಿ ಬೆಳೆಯುತ್ತಿವೆ. ಪ್ರತಿವರ್ಷ ರಾಜ್ಯದಲ್ಲಿ 1.5 ಲಕ್ಷಕ್ಕೂ ಹೆಚ್ಚು ಎಂಜಿನಿಯರ್‌ಗಳು ಪದವಿ ಪಡೆಯುತ್ತಿದ್ದಾರೆ. ಕೈಗಾರಿಕಾ ಉದ್ಯೋಗಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಶೇ.37ರಷ್ಟಿದೆ ಎಂದು ವಿವರಿಸಿದರು.

ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಅಗತ್ಯ. ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಅಭಿವೃದ್ಧಿಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕು. ಬಸವಣ್ಣನವರ ಕಾಯಕವೇ ಕೈಲಾಸ ತತ್ವ ಹಾಗೂ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಉಲ್ಲೇಖಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದರು.

ಪಿಂಕ್ ಲೈನ್ ಉದ್ಘಾಟನೆಯು ಸಾವಿರಾರು ಎಂಜಿನಿಯರ್‌ಗಳು, ಕಾರ್ಮಿಕರು ಮತ್ತು ಅಧಿಕಾರಿಗಳ ಪರಿಶ್ರಮದ ಫಲವಾಗಿದೆ. ಉತ್ತಮ ಮೆಟ್ರೋ ವ್ಯವಸ್ಥೆಯಿಂದ ಜನರ ಪ್ರಯಾಣದ ಸಮಯ ಉಳಿತಾಯವಾಗಿ ಕುಟುಂಬದೊAದಿಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

230 ತಾಲ್ಲೂಕು ಬರಪೀಡಿತ

ರಾಜ್ಯದಲ್ಲಿ ಕಳೆದ 70 ವರ್ಷಗಳಲ್ಲೇ ಎರಡನೇ ಅತಿ ಕಡಿಮೆ ಮಳೆಯಾಗಿದ್ದು, ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ 240 ತಾಲ್ಲೂಕುಗಳ ಪೈಕಿ 230 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 58 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಅಂದಾಜು 62,482 ಕೋಟಿ ನಷ್ಟ ಸಂಭವಿಸಿದೆ. ರಾಷ್ಟಿçÃಯ ವಿಪತ್ತು ಪ್ರತಿಕ್ರಿಯಾ ನಿಧಿಯಡಿ ರಾಜ್ಯವು 22,400.58 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದೆ. ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡಲು ಈ ಮೊತ್ತವನ್ನು ತ್ವರಿತವಾಗಿ ಅನುಮೋದಿಸಿ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ಅವರಿಗೆ ಮುಖ್ಯಮಂತ್ರಿ ಮನವಿ ಮಾಡಿದರು.

Recent Articles

spot_img

Related Stories

Share via
Copy link