ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ : ಬಿಗ್ ಟ್ವಿಸ್ಟ್ – ಪತ್ನಿ ಅರೆಸ್ಟ್

ಉಡುಪಿ: ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆತನ ಪತ್ನಿ ಸೌಮ್ಯ ಸುದೀಪ್​ ಜೊತೆಗೆ ಎರಡನೇ ಮದುವೆಯಾಗಿದ್ದು, ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಾಳೆಂದು ಆತನ ತಂದೆ ದಾಮೋದರ ಶೆಟ್ಟಿ ಕೇಸ್ ದಾಖಲಿಸಿದ್ದರು.

ಸೌಮ್ಯ ಮೇಲಿನ ಆರೋಪಗಳು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆ ಕಾರ್ಕಳ ನಗರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಘಟನೆಯ ಬಳಿಕ ಮಾರ್ಚ್ 22ರಂದು ಸುದೀಪ್ ರೈ ಅವರು ವಿಷ ಸೇವಿಸಿರುವುದಾಗಿ ಸೌಮ್ಯ ಶೆಟ್ಟಿ ಸಂಬಂಧಿಕರಿಗೆ ಕರೆಮಾಡಿ ತಿಳಿಸಿದ್ದಳು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 29ರಂದು ಮೃತಪಟ್ಟಿದ್ದರು.

ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಸುದೀಪ್ ತಂದೆ ಸೌಮ್ಯಳೇ ಮಗನಿಗೆ ಮಾನಸಿಕ ಹಿಂಸೆ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ್ದಳು ಎಂದು ದೂರು ನೀಡಿದ್ದರು

Recent Articles

spot_img

Related Stories

Share via
Copy link