ಹಾವೇರಿ:
ಸಾಲದ ಅರ್ಜಿ ತಿರಸ್ಕೃತಗೊಂಡಿದ್ದಕ್ಕೆ ಮನನೊಂದ ವ್ಯಕ್ತಿಯೊಬ್ಬ ಬ್ಯಾಂಕ್ಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ಭಾನುವಾರ ನಡೆದಿದ್ದು, ಆರೋಪಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಬ್ಯಾಂಕ್ ಅಧಿಕಾರಿಗಳು ಸಾಲ ನೀಡುವುದಕ್ಕೆ ನಿರಾಕರಿಸಿದರು ಎಂದ ಮಾತ್ರಕ್ಕೆ ವ್ಯಕ್ತಿಯೊಬ್ಬ ಬ್ಯಾಂಕಿಗೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ನಡೆದಿದೆ.
ಇದೀಗ ಆರೋಪಿಯನ್ನು ಬಂಧಿಸಲಾಗಿದ್ದು, ಕಾಗಿನೆಲ್ಲಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 436, 477, 435 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ದಾಖಲೆಗಳ ಪರಿಶೀಲನೆಯ ನಂತರ ಬ್ಯಾಂಕ್ ಅವರ ಸಾಲದ ಅರ್ಜಿಯನ್ನು ನಿರಾಕರಿಸಿತು.
ಬ್ಯಾಂಕ್ ಅಧಿಕಾರಿಗಳು ಸಾಲ ನೀಡುವುದಕ್ಕೆ ನಿರಾಕರಿಸಿದರು ಎಂಬ ಕಾರಣಕ್ಕೆ ಬ್ಯಾಂಕ್ಗೆ ಬೆಂಕಿ ಹಚ್ಚಿದೆ ಎಂದು ಆರೋಪಿ ವಾಸೀಂ ಅಕ್ರಂ ಮುಲ್ಲಾ ಹೇಳಿಕೆ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2022/01/Capture-96.gif)