ಬರಗೂರು; ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಸೆಂಟರ್

 ಬರಗೂರು : 

       ಬರಗೂರು ಗ್ರಾಮಸ್ಥರ ಹಾಗೂ ಹಲವು ಇಲಾಖೆಯ ಅಧಿಕಾರಿಗಳ ಮನವಿಗೆ ಸ್ಪಂದಿಸಿ, ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡ ಶೀಘ್ರದಲ್ಲೆ ಬರಗೂರು ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಸೆಂಟರ್ ತೆರೆಯುವ ಭರವಸೆ ನೀಡಿದ್ದಾರೆ.

ಶಿರಾ ತಾಲ್ಲೂಕು ಬರಗೂರು ವ್ಯಾಪ್ತಿಯಲ್ಲಿ ಹೆಚ್ಚು ಪಾಸಿಟೀವ್ ಕೇಸುಗಳು ಉಲ್ಬಣಿಸುತ್ತಿವೆ. ಈ ಭಾಗದಲ್ಲಿ ಕೋವಿಡ್ ಕೇರ್ ಸೆಂಟರ್ ಮಾಡುವ ಬಗ್ಗೆ ಇಲ್ಲಿನ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳು, ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಪೋಲೀಸ್ ಇಲಾಖೆ ಹಾಗೂ ಗ್ರಾಮದ ಮುಖಂಡರು ತುರ್ತು ಸಭೆ ಸೇರಿ ಚರ್ಚಿಸಿದ್ದರು. ಈ ಭಾಗದಲ್ಲಿ ಕೋವಿಡ್ ಸೆಂಟರ್ ಮಾಡುವುದರಿಂದ ಪಾಸಿಟೀವ್ ಕಾಣಿಸಿಕೊಂಡ ಗ್ರಾಮೀಣ ಜನರು ಯಾವುದೇ ಭಯವಿಲ್ಲದೆ ಹತ್ತಿರದ ಕೋವಿಡ್ ಕೇರ್ ಸೆಂಟರ್‍ಗೆ ದಾಖಲಾಗಿ ವೈದ್ಯರ ಸಲಹೆ, ಚಿಕಿತ್ಸೆ ಪಡೆಯಲು ಸಹಕರಿಸುತ್ತಾರೆಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಂದೀಶ್ ಕ್ಷೇತ್ರದ ಶಾಸಕರು ಸಹಕರಿಸಿದರೆ ಕೋವಿಡ್ ಕೇರ್ ಸೆಂಟರ್ ತೆರೆಯಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಕ್ಕೆ ಸ್ಪಂದಿಸಿದ ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡರು ಬರಗೂರಿನ ಬಾಲಕಿಯರ ವಿದ್ಯಾರ್ಥಿಗಳ ವಸತಿ ಗೃಹದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

      ಶಾಸಕ ಡಾ.ಸಿ.ಎಂ.ರಾಜೇಶ್‍ಗೌಡ ಮಾತನಾಡಿ, ಶಿರಾದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದಿದ್ದು, ಇಲ್ಲಿ ಪಾಸಿಟೀವ್ ಕೇಸ್‍ಗಳು ಹೆಚ್ಚಾಗಿದ್ದರಿಂದ ಸ್ಥಳಾವಕಾಶದ ಕೊರತೆ ಇದೆ. ಆದ್ದರಿಂದ ಹುಲಿಕುಂಟೆ ಹೋಬಳಿಯ ಬರಗೂರು ಹಾಗೂ ದ್ವಾರನಕುಂಟೆ ಭಾಗಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಉದ್ದೇಶಿಸಲಾಗಿದೆ. ಶೀಘ್ರದಲ್ಲೇ ಬರಗೂರು ಗ್ರಾಮದ ಬಾಲಕಿಯರ ವಿದ್ಯಾರ್ಥಿ ವಸತಿ ಗೃಹದಲ್ಲಿ ್ಲ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು. ಆರೋಗ್ಯ ಸಿಬ್ಬಂದಿಯನ್ನು ನೇಮಿಸಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುವುದು. ನಂತರ ದ್ವಾರನಕುಂಟೆ ಗ್ರಾಮದಲ್ಲಿ ಮತ್ತೊಂದು ಕೋವಿಡ್ ಸೆಂಟರ್ ಮಾಡಲಾಗುವುದು. ಗ್ರಾಮಗಳ ಸ್ಥಳೀಯ ಮುಖಂಡರು ಹಾಗೂ ಕೋವಿಡ್ ಸೋಂಕಿತರು ದಯಮಾಡಿ ಸಹಕರಿಸಿ ಕೋವಿಡ್ ಸೋಂಕಿನಿಂದ ಪಾರಾಗಿ ತಮ್ಮಗಳ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

       ಇದೇ ವೇಳೆ ಡಾ.ಸಿ.ಎಂ.ರಾಜೇಶ್‍ಗೌಡ, ತಹಸೀಲ್ದಾರ್ ಮಮತಾ ಬರಗೂರು ಹಾಗೂ ದ್ವಾರನಕುಂಟೆ ಭಾಗದಲ್ಲಿನ ವಿದ್ಯಾರ್ಥಿಗಳ ವಸತಿ ಗೃಹಗಳಿಗೆ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್ ಮಾಡುವ ಬಗ್ಗೆ ಸ್ಥಳ ಪರಿಶೀಲನೆ ಮಾಡಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಜಯರಾಮಯ್ಯ, ಗ್ರಾಮಸ್ಥರಾದ ಬಿ.ಎಸ್.ಸಿದ್ದೇಶ್ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap