ಬರಗೂರು : ಮಹಿಳೆಯರಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ

 ಬರಗೂರು : 

      ನಮ್ಮ ದೇಶದಲ್ಲಿ ಪುರುಷರಿಗಿಂತಲೂ ಮಹಿಳೆಯರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹಾಗಾಗಿ ತುಮಕೂರಿನ ಶ್ರೀದೇವಿ ಆಸ್ಪತ್ರೆ ಆಶ್ರಯದಲ್ಲಿ ಸ್ತ್ರೀಯರಿಗೆ ಸಂಬಂಧಿಸಿದ ರೋಗಗಳಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಿ, ಹೆಣ್ಣು ಮಕ್ಕಳಿಗೆ ಆಶ್ರಯ ನೀಡುವಂತಹ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಶ್ರೀದೇವಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಭವಾನಿ ತಿಳಿಸಿದರು.

ಅವರು ಬುಧವಾರ ಶಿರಾ ತಾಲ್ಲೂಕು ಬರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುಮಕೂರಿನ ಶ್ರೀದೇವಿ ಮೆಡಿಕಲ್ ಕಾಲೇಜು ಹಾಗೂ ಶ್ರೀದೇವಿ ಆಸ್ಪತ್ರೆ ಇವರ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ತ್ರೀರೋಗ ಮತ್ತು ಗರ್ಭಿಣಿಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಜಿಲ್ಲಾದ್ಯಂತ ಹಲವಾರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿದ್ದೇವೆ. ಇದರಿಂದ ಬಡವರ್ಗದ ಅನೇಕ ಮಹಿಳೆಯರಿಗೆ ಅನುಕೂಲವಾಗಿದೆ. ಶ್ರೀದೇವಿ ಆಸ್ಪತ್ರೆಯಲ್ಲಿ ನುರಿತ ವೈದ್ಯರಿದ್ದು, ಉತ್ತಮ ಚಿಕಿತ್ಸೆ ಲಭ್ಯವಿದೆ. ಸ್ತ್ರೀಯರಲ್ಲಿ ಗರ್ಭಕೋಶ ಸಮಸ್ಯೆಗಳು, ಮುಟ್ಟಿನ ಸಮಸ್ಯೆಗಳು ಸೇರಿದಂತೆ ಹೆಣ್ಣು ಮಕ್ಕಳ ಹಲವಾರು ಸಮಸ್ಯೆಗಳಿಗೆ ಸೂಕ್ತ ಸಲಹೆ ಹಾಗೂ ಸಮಾಲೋಚನೆ ನಡೆಸಲಾಗುವುದು. ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳನ್ನು ಶ್ರೀದೇವಿ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಅತಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಮಾಡಲಾಗುವುದು ಎಂದರು.

ಶ್ರೀದೇವಿ ಆಸ್ಪತ್ರೆ ವೈದ್ಯ ಅನಿಲ್, ಡಾ.ಕಾರ್ತಿಕ್, ಬರಗೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ನಂದೀಶ್, ಆಯುಷ್ ವೈದ್ಯ ಡಾ.ರಾಜು, ಹಿರಿಯ ಆರೋಗ್ಯ ಸಹಾಯಕ ಭೀಮಣ್ಣ, ಕಿರಿಯ ಆರೋಗ್ಯ ಸಹಾಯಕ ಮನುಕಿರಣ್, ಮಾರ್ಕೆಟಿಂಗ್ ವಿಭಾಗದ ಲೋಕೇಶ್, ಹಿರಿಯ ಆರೋಗ್ಯ ಸಹಾಯಕಿ ಸಿದ್ದಗಂಗಮ್ಮ, ವಿಜಯಲಕ್ಷ್ಮೀ, ಆರೋಗ್ಯ ಸಹಾಯಕಿಯರಾದ ಮಂಜುಳ, ತ್ರಿವೇಣಿ, ಪದ್ಮ, ಆಸ್ಪತ್ರೆ ಸಿಬ್ಬಂದಿ ಪ್ರೇಮಕುಮಾರಿ, ರಂಗನಾಥ, ಲಲಿತ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link