ಜನೌಷಧಿ ಕೇಂದ್ರ ಸ್ಥಗಿತದ ಆದೇಶ ರದ್ದು ಪಡಿಸುವಂತೆ ಮಾಜಿ ಸಿಎಂ ಆಗ್ರಹ

ಬೆಂಗಳೂರು:

    ಜನೌಷಧಿ ಕೇಂದ್ರ ಸ್ಥಗಿತಗೊಳಿಸುವಂತೆ ಹೊರಡಿಸಿರುವ ಆದೇಶವನ್ನು ರದ್ದು ಪಡಿಸುವಂತೆ ಸಂಸದ ಬಸವರಾಜ ಬೊಮ್ಮಾಯಿಯ ಆಗ್ರಹಿಸಿದ್ದಾರೆ.ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಹಾವೇರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ದಿನೇಶ ಗುಡಂಡುರಾವ ಅವರಿಗೆ ಆಗ್ರಹಿಸುತ್ತೇನೆ.

    ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿ ಸ್ಥಗಿತಗೊಳಿಸುವುದರಿಂದ ಸಾಮಾನ್ಯ ಬಡ ಜನರಿಗೆ ಉತ್ತಮ ಗುಣಮಟ್ಟದ ಜನರಿಕ್ ಔಷಧಿಗಳನ್ನು ಕಡಿಮೆ ಹಾಗೂ ಕೈಗೆಟುಕುವ ದರಗಳಲ್ಲಿ ದೊರಕಿಸುವ ಕೇಂದ್ರ ಸರ್ಕಾರದ ಉದ್ದೇಶಕ್ಕೆ ಅಡ್ಡಿಪಡಿಸಿದಂತಾಗುತ್ತದೆ. ಆದುದ್ದರಿಂದ, ಸದರಿ ವಿಷಯದ ಬಗ್ಗೆ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಬೇಕೆಂದು ಕೋರುತ್ತೇನೆ ಎಂದಿದ್ದಾರೆ

Recent Articles

spot_img

Related Stories

Share via
Copy link