‘ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ’ – ಬೊಮ್ಮಾಯಿ

ನವದೆಹಲಿ : 

     ‘ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ,  ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ.

      ”ಬಿಜೆಪಿ ಈಗ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದ ಎಲ್ಲ ವರ್ಗದವರನ್ನೂ ತಲುಪಿ ಅವರ ಬೆಂಬಲ ಪಡೆದ ಪಕ್ಷವಾಗಿದೆ. ಉತ್ತರ ಕರ್ನಾಟಕದಿಂದ ಲಿಂಗಾಯತ ಸಮುದಾಯದ ಹಲವು ಮಂದಿ ಬಿಜೆಪಿ ಶಾಸಕರು, ಸಂಸದರಾಗಿದ್ದಾರೆ. ಆದರೆ ಒಂದು ಪಕ್ಷ ಅಧಿಕಾರಕ್ಕೆ ಬರಬೇಕೆಂದರೆ ಪರಿಶಿಷ್ಟ ಜಾತಿ, ಪಂಗಡ, ಒಕ್ಕಲಿಗ, ಹಿಂದುಳಿದ ವರ್ಗದವರ ಬೆಂಬಲ ಬೇಕು. ಈ ವರ್ಗದವರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹಾಗಾಗಿ ಬಿಜೆಪಿ ಈಗ ಕರ್ನಾಟಕದಲ್ಲಿ ಸಮಾಜದ ಎಲ್ಲ ವರ್ಗದವರ ಪಕ್ಷವಾಗಿದೆ,”
ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link