ಚಿತ್ರದುರ್ಗ:
ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್ವುಡ್ನ ಡಾ.ಪುನೀತ್ ರಾಜ್ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್ರಾಜ್ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಿದರು.
ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಫಲಕ ಒಳಗೊಂಡಿದೆ.
ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್ಕುಮಾರ್ ಅವರ ಮುದ್ದಿನ ಮಗ ಪುನೀತ್. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪ್ರಣೀತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಕನ್ನಡ ಚಲನಚಿತ್ರ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಪುನೀತ್ರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದರು.
ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ