ಈಜಿಪುರ ಮೇಲ್ಸೇತುವೆ ಕಾಮಗಾರಿ ಮಾರ್ಚ್ 2026 ರೊಳಗೆ ಪೂರ್ಣ: BBMP

ಬೆಂಗಳೂರು:

    ಈಜಿಪುರ ಮೇಲ್ಸೇತುವೆ ಯೋಜನೆ ಮಾರ್ಚ್ 2026 ರೊಳಗೆ ಪೂರ್ಣಗೊಳ್ಳಲಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ  ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಶುಕ್ರವಾರ ಹೇಳಿದ್ದಾರೆ.ಮೇಲ್ಸೇತುವೆಗೆ ಕಾಸ್ಟಿಕ್‌ ಮಾಡುವ ಕಾರ್ಯವನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿದ ಅವರುಸ ನಿರ್ಮಾಣ ಕಾರ್ಯಗಳ ವೇಗ ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

   ಈಜಿಪುರ ಮುಖ್ಯರಸ್ತೆಯಲ್ಲಿ 2.38 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಿಸಲಾಗುತ್ತಿದೆ. ಒಟ್ಟು 762 ಸೆಗ್ಮೆಂಟ್‌ ಕಾಸ್ಟಿಂಗ್‌ಗಳನ್ನು ಅಳವಡಿಸಬೇಕಿದ್ದು, 437 ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಸಲಾಗಿದೆ. ಪ್ರತಿ ತಿಂಗಳು 45 ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

   ಈ ವೇಳೆ ಆಯುಕ್ತರು ‘ಸೆಗ್ಮೆಂಟ್‌ ಕಾಸ್ಟಿಂಗ್‌ ಅಳವಡಿಕೆ ಕಾಮಗಾರಿಗೆ ಇನ್ನಷ್ಟು ವೇಗ ನೀಡಿ, ಈ ವರ್ಷಾಂತ್ಯಕ್ಕೆ ಪೂರ್ಣಗೊಳಿಸಬೇಕು. ಇನ್ನುಳಿದ ಕಾಮಗಾರಿಯನ್ನು 2026ರ ಮಾರ್ಚ್‌ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

   ಈಜಿಪುರ ಮೇಲ್ಸೇತುವೆ ಕಾಮಗಾರಿಯಲ್ಲಿ ಸೆಗ್ಮೆಂಟ್‌ ಅನ್ನು ರಾತ್ರಿ 11ರಿಂದ ಬೆಳಿಗ್ಗೆ 5ರವರೆಗೆ ಮಾತ್ರ ಅಳವಡಿಸಲಾಗುತ್ತಿದೆ. ಉಳಿದ ಕಾಮಗಾರಿಯನ್ನು ಸಂಚಾರ ದಟ್ಟಣೆಯ ನಡುವೆಯೂ ಮಾಡಲಾಗುತ್ತಿದೆ. ಪಾದಚಾರಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಮೇಲ್ಸೇತುವೆ ಕಾಮಗಾರಿ ಮುಗಿದಿರುವ ಕೆಳಭಾಗದ ರಸ್ತೆಯಲ್ಲಿ ಡಾಂಬರೀಕರಣ ಮಾಡಲಾಗಿದೆ. ಶೋಲ್ಡರ್‌ ಡ್ರೈನ್‌ ಮತ್ತು ಮೀಡಿಯನ್‌ ಕಾಮಗಾರಿ ನಡೆಯುತ್ತಿದೆ ಎಂದು ಯೋಜನೆಯ ಮುಖ್ಯ ಎಂಜಿನಿಯರ್‌ ರಾಘವೇಂದ್ರ ಪ್ರಸಾದ್‌ ಮಾಹಿತಿ ನೀಡಿದರು.

Recent Articles

spot_img

Related Stories

Share via
Copy link