ಕಸದಿಂದ ವಿದ್ಯುತ್‌ ಉತ್ಪಾದನೆ ಘಟಕ ಪರಿಶೀಲಿಸಿದ ಬಿಬಿಎಂಪಿ ಆಯುಕ್ತ

ಬೆಂಗಳೂರು:

     ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಸಿಎಲ್) ಬಿಡದಿಯಲ್ಲಿ ಸ್ಥಾಪಿಸುತ್ತಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಪ್ರಾಯೋಗಿಕ ಚಾಲನೆಗೆ ಶೀಘ್ರವೆ ಸಿದ್ಧತೆ ನಡೆಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

    ಬಿಡದಿಯಲ್ಲಿ ನಿರ್ಮಾಣವಾಗುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಭೇಟಿ ನೀಡಿದ್ದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು. ನಗರದಲ್ಲಿನ ಅತಿಯಾದ ಕಸದ ಸಮಸ್ಯೆಯನ್ನು ಪರಿಹರಿಸುವ ಗುರಿಯನ್ನು ಘಟಕ ಹೊಂದಿದೆ.

    ಈ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರು. ವೆಚ್ಚವಾಗುತ್ತಿದೆ. ಪ್ರತಿನಿತ್ಯ 11.5 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ. ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ ಎಂದು ಹೇಳಿದರು. ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೆ ನಂ.39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದೆ. ಅಲ್ಲಿ ಸಮಗ್ರ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಯನ್ನು ಸ್ಥಾಪಿಸಲು ಸ್ಥಳ ಪರಿಶೀಲನೆ ನಡೆಸಿದರು. ತ್ಯಾಜ್ಯದಿಂದ ವಿದ್ಯುತ್ ಸ್ಥಾವರದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap