ಬೆಂಗಳೂರು,
ನಗರದ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸುಮಾರು ಮೂರುವರ್ಷದಿಂದ ಬಿಲ್ ನೀಡದೇ ನಿರ್ಲಕ್ಷ್ಯ ವಹಿಸಿದೆ.
ಪಾಲಿಕೆ (BBMP) ವ್ಯಾಪ್ತಿಯಲ್ಲಿ ಕಾಮಗಾರಿ ಮೂರು ವರ್ಷಗಳ ಹಿಂದೆಯೆ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಆ ಕಾಮಗಾರಿ ಪೂರ್ಣಗೊಳಿಸಿದ್ದ ಗುತ್ತಿಗೆದಾರರಿಗೆ ನೀಡಬೇಕಾದ ಸರಿಸುಮಾರು 200 ಕೋಟಿಗಳಷ್ಟು ಹಣವನ್ನು ಬಿಡುಗಡೆ ಮಾಡಿಲ್ಲ. ಹೀಗೆಂದು ಆರೋಪಿಸಿದ ಬಿಬಿಎಂಪಿ ಮತ್ತು ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಲಿಮಿಟೆಡ್ನಲ್ಲಿ (KRIDL) ಕೆಲಸ ಮಾಡುತ್ತಿರುವ ಗುತ್ತಿಗೆದಾರರು ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಕೆಆರ್ಐಡಿಎಲ್ ವಿರುದ್ಧ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಇದನ್ನೆ ನೆಪವಾಗಿಟ್ಟುಕೊಂಡಿರುವ ಬಿಬಿಎಂಪಿ ಬಾಕಿ ಬಿಲ್ ಪಾವತಿಸದೇ ವಿಳಂಬ ಮಾಡುತ್ತಿದೆ. ನಿಯಮಗಳಂತೆ ಎರಡು ಕೋಟಿ ರೂಪಾಯಿಗೆ ವರೆಗಿನ ಕಾಮಗಾರಿಯ ಕೆಆರ್ಐಡಿಎಲ್ ಮೂಲಕ ನಿರ್ವಹಿಸಲಾಗಿದೆ. ಒಟ್ಟು 120ಕ್ಕೂ ಹೆಚ್ಚು ಗುತ್ತಿಗೆದಾರರಿಗೆ 200 ಕೋಟಿ ರೂಪಾಯಿ ಬಿಲ್ ಬಾಕಿ ಇದೆ. ಅದನ್ನು ನೀಡುವಂತೆ ಗುತ್ತಿಗೆದಾರರು ವರ್ಷಗಳಿಂದಲೂ ದುಂಬಾಲು ಬಿದ್ದರು ಪ್ರಯೋಜನವಾಗಿಲ್ಲ ಎಂದು ಗುತ್ತಿಗೆದಾರ ಪ್ರತಾಪ್ ಅಳಲು ತೋಡಿಕೊಂಡರು.
