ಮಳೆ ಬಂದ ಮೇಲೆ ಚುರುಕಾದ ಬಿಬಿಎಂಪಿ…..!

ಬೆಂಗಳೂರು: 

    ಬೆಂಗಳೂರಿನಲ್ಲಿ ಜೋರು ಮಳೆ ಶುರುವಾಗಿ ಅವಾಂತರಗಳು ಸೃಷ್ಟಿಯಾಗಿವೆ. ಹಲವು ಪ್ರದೇಶಗಳು ಮುಳುಗಡೆಯಾಗಿರುವ ಕಾರಣ ಸಾಂಕ್ರಮಿಕ ರೋಗಗಳ ಆತಂಕವೂ ಸೃಷ್ಟಿಯಾಗಿದೆ. ಮಳೆಗಾಲಕ್ಕೆ ಸಿದ್ಧತೆ ನಡೆಸದೇ ಇದ್ದ ಬಿಬಿಎಂಪಿ ಈಗ ಡ್ಯಾಮೇಜ್‌ ಕಂಟ್ರೋಲ್ ಮಾಡುವ ಉದ್ದೇಶದಿಂದ ತರಾತುರಿಯಲ್ಲಿ ಕೆಲಸ ಮಾಡಲು ಆರಂಭಿಸಿದೆ.ಸಾಂಕ್ರಾಮಿಕ ರೋಗ ತಡೆಗೆ ನಿಗಾ ಇಡಲು ಸಜ್ಜಾದ ಬಿಬಿಎಂಪಿ ಅಧಿಕಾರಿಗಳು ಮಳೆ ಬಿದ್ದ ಜಾಗಗಳಲ್ಲಿ ಜಾಗ್ರತಾ ಕ್ರಮಗಳನ್ನು ನಡೆಸಲು ಮುಂದಾಗಿದೆ. ಮಳೆಯಿಂದ ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಮಳೆ ತಗ್ಗಿದ ಬಳಿಕ ಸಾಂಕ್ರಾಮಿಕ ರೋಗ ಹರಡುವ ಆತಂಕ ನೀರಿನ ಮೂಲಗಳ ಪರಿಶೀಲನೆಗೆ ಬಿಬಿಎಂಪಿ ಯೋಜನೆ ಹಾಕಿಕೊಂಡಿದೆ.

    ಜಲಮಂಡಳಿ ಜೊತೆ ಕುಡಿಯೋ ನೀರಿನ ಪೈಪ್​​ಗಳ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಕಾಲರಾ, ಜಾಂಡೀಸ್​​, ಕರುಳಬೇನೆ ಹರಡದಂತೆ ತಡೆಯಲು ತಯಾರಿ ನಡೆಸುತ್ತಿದ್ದಾರೆ. ಮಳೆ ಪ್ರದೇಶಗಳಲ್ಲಿ ತಾತ್ಕಾಲಿಕ ಆರೋಗ್ಯ ಶಿಬಿರ ತೆರೆಯಲು ಚಿಂತನೆ ನಡೆಸಲಾಗುತ್ತಿದೆ. ಜೊತೆಗೆ ಕುಡಿಯುವ ನೀರಿನ ತಪಾಸಣೆ ನಡೆಸಲೂ ಪಾಲಿಕೆ ಚಿಂತನೆ ನಡೆಸುತ್ತಿದೆ. 

   ಅ. 24ರಂದು ಕರಾವಳಿಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

   ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಗುರುವಾರ ಕೂಡ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ.

   ಇನ್ನು ಅ.25ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಅದೇ ರೀತಿ ಅ. 26ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ.

    ಹಾಗೆಯೇ ಅ.27ರಂದು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ, ಉತ್ತರ ಹಾಗೂ ಕರಾವಳಿ ಒಳನಾಡಿನಲ್ಲಿ ಒಣ ಹವೆಯಿರುವ ಸಾಧ್ಯತೆ. ಇದೇ ರೀತಿಯ ಹವಾಮಾನ ಅ.29ರವರೆಗೆ ಮುಂದುವರಿಯಲಿದೆ.

   ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20 ° C ಆಗಿರಬಹುದು.

   ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರ ಮೂಲಕ ಮನೆಗಳಿಗೆ ಭೇಟಿ ನೀಡಲು ಬಿಬಿಎಂಪಿ ಯೋಜನೆ ರೂಪಿಸಿದೆ. ಅಗತ್ಯ ಇರೋ ಕಡೆ ಒಆರ್​ಎಸ್​, ಅಗತ್ಯ ಮಾತ್ರೆಗಳ ವಿತರಣೆಗೂ ತಯಾರಿ ನಡೆಸಲಾಗಿದೆ. ಈ ಬಗ್ಗೆ ಮಾರ್ಗಸೂಚಿ ಹೊರಡಿಸಿರುವ ಬಿಬಿಎಂಪಿ ಆರೋಗ್ಯ ವಿಭಾಗ ಮಳೆ ಅವಾಂತರದ ಡ್ಯಾಮೇಜ್​ ಕಂಟ್ರೋಲ್‌ಗೆ ಸಿದ್ದತೆ ನಡೆಸಿಕೊಂಡಿದ್ದಾರೆ.

Recent Articles

spot_img

Related Stories

Share via
Copy link
Powered by Social Snap