ಇಂದಿರಾ ಕ್ಯಾಂಟೀನ್‌ ಮೆನು ಬದಲಾವಣೆಗೆ ಮುಂದಾದ ಬಿಬಿಎಂಪಿ….!

ಬೆಂಗಳೂರು:

       ಹಿರಿಯ ನಾಗರೀಕರ ಬೇಡಿಕೆಯ ಮೇರೆಗೆ ಇಂದಿರಾ ಕ್ಯಾಂಟೀನ್ ಮೆನು ಬದಲಾಯಿಸಲು ಬಿಬಿಎಂಪಿ ಮುಂದಾಗಿದ್ದು, ಇದಕ್ಕೆ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.

    ಈವರೆಗೆ ಮಧ್ಯಾಹ್ನ ಮತ್ತು ರಾತ್ರಿ ಕೇವಲ ರೈಸ್‌ ಬಾತ್‌ ಅಥವಾ ಅನ್ನ, ಸಾಂಬರ್‌, ಮೊಸರನ್ನ ಮಾತ್ರ ವಿತರಣೆ ಮಾಡಲಾಗುತ್ತಿತ್ತು. ಹಿರಿಯ ನಾಗರಿಕರು,ಸಕ್ಕರೆ ಕಾಯಿಲೆ ಇರುವವರು ಸೇರಿದಂತೆ ಮೊದಲಾದವರು ಕೇವಲ ರೈಸ್‌ ಪದಾರ್ಥದ ಊಟ ಬೇಡ, ಮುದ್ದೆ, ಚಪ್ಪಾತಿ ನೀಡುವಂತೆ ಬೇಡಿಕೆ ಇತ್ತು.

   ಇದೀಗ ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟ ಮಾಡುವವರಿಗೆ ಮುದ್ದೆ ಭಾಗ್ಯ ನೀಡುವುದಕ್ಕೆ ಬಿಬಿಎಂಪಿ ಸಿದ್ಧತೆ ಮಾಡಲಾಗುತ್ತಿದೆ. ಸಂಕ್ರಾಂತಿ ವೇಳೆಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಮುದ್ದೆ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

   ಸಮರ್ಪಕ ನಿರ್ವಹಣೆ ಕೊರತೆ, ಕಳಪೆ ಆಹಾರ ಪೂರೈಕೆ ಸೇರಿದಂತೆ ಮೊದಲಾದ ಕಾರಣದಿಂದ ಇಂದಿರಾ ಕ್ಯಾಂಟೀನ್‌ಗಳು ತಮ್ಮ ಕಳೆ ಕಳೆದುಕೊಂಡಿದ್ದವು. ಗ್ರಾಹಕರ ಸಂಖ್ಯೆಯಲ್ಲಿಯೂ ಇಳಿಕೆಯಾಗಿತ್ತು. 

  ಇದೀಗ ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕೆ ಮುದ್ದೆ ಮತ್ತು ಚಪಾತಿ ನೀಡುವುದಕ್ಕೆ ತೀರ್ಮಾನಿಸಲಾಗಿದ್ದು, ಇದರಿಂದ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮತ್ತೆ ಗ್ರಾಹಕರನ್ನು ಆಕರ್ಷಣೆಗೊಳಗಾಗುವಂತೆ ಮಾಡಲಿದೆ.

   ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಮಧ್ಯಾಹ್ನ ಮತ್ತು ರಾತ್ರಿ ಊಟಕ್ಕ ಚಪಾತಿ ಆರಂಭಿಸುವಂತೆ ಹಲವರು ಬೇಡಿಕೆ ಇಟ್ಟಿದ್ದರು. ಹೀಗಾಗಿ ಜನವರಿ 26ರ ವೇಳೆಗೆ ಮೆನುವಿನಲ್ಲಿ ಇವುಗಳ ಸೇರ್ಪಡೆಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

   ಇದಕ್ಕೆ ಸಾರ್ವಜನಿಕರು ಹೆಚ್ಚುವರಿ ವೆಚ್ಚ ಮಾಡಬೇಕಿಲ್ಲ. ಇಂದಿರಾ ಕ್ಯಾಂಟೀನ್‌ ಗ್ರಾಹಕರ ಸಂಖ್ಯೆಯಲ್ಲಿ ಗೋಲ್‌ ಮಾಲ್‌ ಮಾಡಲಾಗುತ್ತಿದೆ. ಸುಳ್ಳು ಲೆಕ್ಕ ನೀಡಿ ರಿಯಾಯಿತಿ ಹಣ ಲೂಟಿ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ, ಪ್ರತಿಯೊಂದನ್ನು ಡಿಜಿಟಲಿಕರಣದ ಮೂಲಕ ಪಾರದರ್ಶಕ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳಉ ತಿಳಿಸಿದ್ದಾರೆ.

   ನಗರದ ಯಾವುದೇ ಇಂದಿರಾ ಕ್ಯಾಂಟೀನ್‌ಗೆ ಗ್ರಾಹಕ ತೆರಳಿ ಊಟ ಅಥವಾ ಉಪಹಾರದ ಕೋಪನ್ ಪಡೆದರೆ ಆ ಮಾಹಿತಿ ಕೇಂದ್ರ ಕಚೇರಿಗೆ ತಲುಪುವಂತೆ ತಂತ್ರಜ್ಞಾನ ಅಭಿವೃದ್ಧಿ ಪಡಿಸಲಾಗಿದೆ. ಇನ್ನು ಸ್ವಚ್ಛತೆ ಸೇರಿದಂತೆ ಇನ್ನಿತರೆ ಕಾರ್ಯಗಳಿಗೆ ಪ್ರತ್ಯೇಕವಾಗಿ ಆ್ಯಪ್‌ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ,

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap