ನವದೆಹಲಿ:
ಹದಿನೆಂಟನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇನ್ನುಳಿದ ಭಾಗವನ್ನು ಕೇವಲ ಒಂದು ವಾರ ಮಾತ್ರ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ. ಸಂಬಂಧಿತ ಅಧಿಕಾರಿಗಳು ಮತ್ತು ಪಾಲುದಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ಸಮಗ್ರ ಮೌಲ್ಯಮಾಪನದ ನಂತರ, ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ದಿನಾಂಕ, ಸ್ಥಳಗಳು ಸೇರಿದಂತೆ ಹೊಸ ವೇಳಾಪಟ್ಟಿ ಅತಿ ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.








