ಬೆಂಗಳೂರು:
ನಗರದ ದೊಡ್ಡಕನೇಲಿಯಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಗ್ನಿ ಅವಘಡದಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲರ್ ಆಗಿದೆ.
ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








