ಬೆಂಗಳೂರು :
( ಫೆ.16) ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ರಾಜ್ಯದಲ್ಲಿ ಸಮವಸ್ತ್ರ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಸಿಎಂ ‘ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ.
ಸಭೆ ಬಳಿಕ ಮಾತನಾಡಿದ ಸಚಿವರು ಫೆ.16 ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಿದ್ದೇವೆ, ಹೈಕೋರ್ಟ್ ಆದೇಶ ಪಾಲಿಸಬೇಕು. ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆದಿದ್ದು , ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಕಾಲೇಜು ಪುನಾರಂಭದ ವೇಳೆ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ