ಬೆಳಗಾವಿ : ಅಕ್ರಮವಾಗಿ ಸಂಗ್ರಹಿಸಿದ್ದ ‘158 ಜಿಲಿಟಿನ್ ಕಡ್ಡಿ’ ಜಪ್ತಿ!!

ಬೆಳಗಾವಿ : 

      ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಜಿಲೆಟಿನ್ 158 ಕಡ್ಡಿಗಳನ್ನು ಜಪ್ತಿ ಮಾಡಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

      ಗೃಹಸಚಿವರು ಹಾಗೂ ಗಣಿ ಸಚಿವರ ಖಡಕ್ ಸೂಚನೆಯ ಮೇರೆಗೆ ರಾಜ್ಯದಲ್ಲಿ ಜಿಲಿಟಿನ್ ಅಕ್ರಮ ಸಂಗ್ರಹಣೆಯ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, ಬೆಳಗಾವಿಯ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದಲ್ಲಿ ಅಕ್ರಮವಾಗಿ ಜಿಲಿಟಿನ್ ಕಡ್ಡಿಗಳನ್ನು ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. 

      ದಾಳಿಯ ವೇಳೆ ಅಕ್ರಮವಾಗಿ ಸಂಗ್ರಹಿಸಿದ್ದಂತ 158 ಜಿಲಿಟಿನ್ ಕಡ್ಡಿ, 51 ಇಡಿ ಕೇಬಲ್ ಹಾಗೂ ಬ್ಲಾಸ್ಟರ್ ಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

      ಈ ಸಂಬಂಧ ಗೋಪಾಲ, ಗಿರಿಮಲ್ಲಪ್ಪ, ರಾಜೇಶ್ ಬಡಿಗೇರ, ಭೀಮಪ್ಪ ಹೆಗಡೆ ಎಂಬುವರನ್ನು ಬಂಧಿಸಲಾಗಿದೆ. ಕುಲಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ