ಬೆಳಗಾವಿ :
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು.
ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಸಿರು ಶಾಲು ಧರಿಸಿದ್ದರು. ದ್ವೀಪ್ರತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು.
ಉಳಿದ ಮುಖಂಡರಾದ ಎಸ್.ಆರ್.ಪಾಟೀಲ, ಎಂ.ಬಿ.ಪಾಟೀಲ, ಆರ್.ವಿ. ದೇಶಪಾಂಡೆ, ಲಕ್ಷ್ಮಿ ಹೆಬ್ಬಾಳಕರ, ನಿಸಾರ್ ಅಹ್ಮದ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರುಗಳು, ಮಾಜಿ ಸಚಿವರು ಡಿಸಿ ಕಚೇರಿ ಆವರಣದ ಹೊರಗಡೆ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ