ಬೆಳಗಾವಿ ಚಳಿಗಾಲ ಅಧಿವೇಶನ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರ

ಬೆಂಗಳೂರು:

    ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶ ಆರಂಭವಾಗುತ್ತಿದ್ದು, ಈ ನಡುವೆ ವಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು, ಕಾರ್ಯತಂತ್ರ ರೂಪಿಸಲು ಗುರುವಾರ ಸಂಜೆ ಸಚಿವರೊಂದಿಗೆ ಸಭೆ ನಡೆಸುತ್ತಿದ್ದಾರೆ.ಇಂದು ಮಧ್ಯಾಹ್ನ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಂಪುಟ ಸಭೆ ಪೂರ್ಣಗೊಂಡ ಬಳಿಕ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಚಿವರೊಂದಿಗೆ ಸಭೆ ನಡೆಯಲಿದ್ದಾರೆ.

   ವಿಧಾನಮಂಡಲ ಅಧಿವೇಶನದಲ್ಲಿ ಅಧಿಕಾರ ಹಂಚಿಕೆ ಕಿತ್ತಾಟ, ಮತ್ತಿತರ ವಿಷಯಗಳ ಪ್ರಸ್ತಾಪಿಸಿ ಪ್ರತಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧತೆ ನಡೆಸುತ್ತಿವೆ.ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎತ್ತಬಹುದಾದ ವಿಚಾರಗಳಿಗೆ ಸರ್ಕಾರದಿಂದ ಯಾವ ರೀತಿಯ ತಿರುಹಗೇಟು ನೀಡಬೇಕೆಂಬ ಬಗ್ಗೆ ಸಚಿವರ ಸಭೆಯಲ್ಲಿ ಮುಖ್ಯಮಂತ್ರಿಗಳು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

   ಇದಲ್ಲದೆ, ವಿವಿಧ ಇಲಾಖೆಗಳಿಂದ ಮಂಡನೆಯಾಗಲಿರುವ ವಿಧೇಯಕಗಳ ಬಗ್ಗೆ, ಪ್ರತಿಪಕ್ಷಗಳು ಇಲಾಖಾವಾರು ಕೇಳುವ ಪ್ರಶ್ನೆಗಳಿಗೆ ಹೇಗೆ ಸಿದ್ಧತೆ ನಡೆಯಬೇಕು ಎಂಬ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Recent Articles

spot_img

Related Stories

Share via
Copy link