ಬೆಂಗಳೂರು : ಮುಂದಿನ 3 ದಿನಗಳಲ್ಲಿ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು :
   ಮುಂದಿನ ಮೂರು ದಿನಗಳಲ್ಲಿ ಮಳೆ ಮತ್ತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
   ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
   ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಾರ್ಕಳ, ಶಿರಾಲಿ, ಧರ್ಮಸ್ಥಳ, ಕೊಟ್ಟಿಗೆಹಾರ, ಭಾಗಮಂಡಲ, ಉಪ್ಪಿನಂಗಡಿ, ಪುತ್ತೂರು, ಉಡುಪಿ, ಮಾಣಿ, ಸೋಮವಾರಪೇಟೆ, ಪೊನ್ನಂಪೇಟೆ, ಶೃಂಗೇರಿಯಲ್ಲಿ ಮಳೆಯಾಗಿದೆ. ಕಾರವಾರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. 

   ಬೆಂಗಳೂರಿನ ಎಚ್​ಎಎಲ್​ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಹೊನ್ನಾವರದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

  ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

   ಧಾರವಾಡದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Recent Articles

spot_img

Related Stories

Share via
Copy link