ಬೆಂಗಳೂರು : ಬೆಂಕಿಗೆ ಆಹುತಿಯಾದ ಖಾಸಗಿ ಬಸ್ಸುಗಳು…..!

ಬೆಂಗಳೂರು:

     ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ. ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

    ಈ ಬೆಂಕಿ ವರ್ಕ್​​ಶಾಪ್​ ನಲ್ಲಿರೋ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ.

    ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಇವು ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ.

    ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವರ್ಕ್​ಶಾಪ್​ ನಿಂದ ಜನರನ್ನು ದೂರ ಕಳುಹಿಸಲಾಗುತ್ತಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap