ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ, 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

ಮಡಿಕೇರಿ :

     ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ  ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು   ಜಿಲ್ಲೆಯ ಮಡಿಕೇರಿ   ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

Recent Articles

spot_img

Related Stories

Share via
Copy link