ಭದ್ರಾ ಮೇಲ್ದಂಡೆ ಯೋಜನೆ ಹಣ ಬಿಡುಗಡೆಗೆ ಶಾಸಕರ ಒತ್ತಾಯ: ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನೆ


ನಾಯಕನಹಟ್ಟಿ :

    ಭದ್ರ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವಂತೆ ಕಲಾಪದಲ್ಲಿ ಪ್ರಸ್ತಾಪಿಸಿದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಯವರಿಗೆ ಬೆಳಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಆರ್. ಮಂಜುಶ್ರೀ ಪಾಲಯ್ಯ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

    ಸಮೀಪದ ಹಾಯ್ಕಲ್ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅಭಿವೃದ್ಧಿಯಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂದರು.

    ರಾಜ್ಯ ಸರ್ಕಾರ ನೀಡುತ್ತಿರುವ ಗೃಹಲಕ್ಷಿö್ಮÃ ಹಣದಿಂದ ಮಹಿಳೆಯರ ಬದುಕು ಬದಲಾಗಿದೆ. ಈ ಹಣದಿಂದ ಕೆಲವರು ಹೆಣ್ಣುಮಕ್ಕಳು ಚಿನ್ನ, ಸೀರೆ, ಮನೆ ಸಾಮಾಗ್ರಿಗಳು ಕೊಂಡುಕೊAಡಿದ್ದಾರೆ. ಇನ್ನೂ ಕೆಲವರು ಅದರಿಂದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಗೃಹಲಕ್ಷಿö್ಮÃ ಯೋಜನೆಯಿಂದ ಇಡೀ ರಾಜ್ಯದ ಬಡ ಮಹಿಳೆಯರಿಗೆ ಅನುಕೂಲವಾಗಿದೆ ಎಂದರು. ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಗೃಹಲಕ್ಷಿ ಯೋಜನೆ ಸುಧಾರಣೆ ಮಾಡುತ್ತಿದೆ. ಸಾಕಷ್ಟು ಬಡ ಕುಟುಂಬಗಳು ಈ ಯೋಜನೆಯ ಮೂಲಕ ಬದುಕು ಕಟ್ಟಿಕೊಂಡಿವೆ. ರಾಜ್ಯ ಸರ್ಕಾರ ಪ್ರತಿ ಕುಟುಂಬಕ್ಕೆ ಅನುಕೂಲ ಮಾಡಿಕೊಟ್ಟಿದೆ. ಪ್ರತಿ ಮನೆಮನೆಯಲ್ಲಿ ಕಾಂಗ್ರೆಸ್ ಸರ್ಕಾರ ಅನುಕೂಲ ಮಾಡಿದೆ ಎಂದರು. 

    ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದ ಜನತೆಗೆ ೫ ಗ್ಯಾರೆಂಟಿ ಯೋಜನೆಗಳನ್ನು ಜಾರಿ ತರುವ ಮೂಲಕ ನುಡಿದಂತೆ ನಡೆಯುತ್ತಿದೆ ಎಂದು ಬೆಳಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ಆರ್.ಮAಜುಶ್ರೀ ಪಾಲಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಬಡವರು ಹಾಗೂ ಜನ ಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವAತ ಪಕ್ಷ ಕಾಂಗ್ರೆಸ್ ಪಕ್ಷ ಹಾಗೂ ಬಡವರ ಬಗ್ಗೆ ಕಾಳಜಿ ಇರುವಂತ ಏಕೈಕ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಭರವಸೆಯಿಂದ ನುಡಿದರು. 

    ಮನೆಮನೆಯಲ್ಲಿ ದೀಪ ಹಚ್ಚಲು ಹೆಣ್ಣು ಮಕ್ಕಳು ಬೇಕು, ಹೆಣ್ಣು ಸಂಸಾರದ ಕಣ್ಣು, ಮನೆಯಲ್ಲಿ ಹೆಣ್ಣು ಮಕ್ಕಳು ಸ್ವಾವಲಂಭಿಯಾಗಬೇಕು ಎಂಬುವುದೆ ಕಾಂಗ್ರೆಸ್ ಪಕ್ಷದ ಗುರಿ. ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿಯೇ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಪ್ರಣಾಳಿಕೆಯಲ್ಲಿ ನೀಡಿದಂತೆ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶವನ್ನು ಅಧಿಕಾರಕ್ಕೆ ಬಂದ ತಿಂಗಳೊಳಗೆ ಹಿಡೇರಿಸಿದೆ. ನಮ್ಮ ಪಕ್ಷ ದೀನ ದಲಿತರ ಅಪಾರವಾದ ಬಗ್ಗೆ ಕಾಳಜಿ ವಹಿಸುತ್ತಿದೆ ಎಂದರು.