ಹುಬ್ಬಳ್ಳಿ:
ನಾಳೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಗುರುವಾರ ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ವೇಳೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದರು.
ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಮಾಜಿ ಸಚಿವ ಸಿ.ಸಿ.ಪಾಟೀಲ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಶಾಸಕರು, ಮಾಜಿ ಶಾಸಕರು ಸ್ಥಳೀಯ ನಾಯಕರು ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿಯಲ್ಲಿ ಯಾವುದೇ ಬಂಡಾಯ ಇಲ್ಲ. ಶಿಗ್ಗಾಂವಿ ಕ್ಷೇತ್ರದಲ್ಲಿ ಒಬ್ಬರೇ ಒಬ್ಬರು ಟಿಕೆಟ್ ಆಕಾಂಕ್ಷೆ ಆಗಿದ್ದಾರೆ. ಬಂಡಾಯಗಾರರು ಎನಿಸಿಕೊಂಡವರು ಇಂದು ಸಭೆ ಮಾಡಿ ತಮ್ಮ ನಿಲುವು ಹೇಳುತ್ತಾರೆ. ಯಾವುದೇ ರೀತಿಯ ಬಂಡಾಯ ಆಗಲ್ಲ. ನಮ್ಮ ಜೊತೆ ಇರುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.