ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿದ ಭಾರತ ….!

ಅಹಮದಾಬಾದ್

     ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023ರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಶುಭ್ ಮನ್ ಗಿಲ್ ಮರಳಿದ್ದು, ಇಶಾನ್ ಕಿಶಾನ್ ಬದಲಿಗೆ ಆರಂಭಿಕರಾಗಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ರೋಹಿತ್ ಶರ್ಮಾ ಹೇಳಿದರು. 

    ಪ್ರಸ್ತುತ ಅಂಕಿಅಂಶಗಳನ್ನು ನೋಡಿದರೆ, ಈ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳು ತಲಾ ಎರಡು ಪಂದ್ಯಗಳನ್ನು ಆಡಿದ್ದು, ಎರಡನ್ನೂ ಗೆದ್ದಿವೆ. ಇದು 50 ಓವರ್‌ಗಳ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎಂಟನೇ ಪಂದ್ಯವಾಗಿದೆ. ಪಾಕಿಸ್ತಾನವು ವಿಶ್ವಕಪ್‌ನಲ್ಲಿ ಭಾರತವನ್ನು  ಸೋಲಿಸಲು ಇನ್ನೂ ಸಾಧ್ಯವಾಗಿಲ್ಲ.

     ಟೀಂ ಇಂಡಿಯಾ ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಬಲಿಷ್ಠ ಬ್ಯಾಟಿಂಗ್ ಪಡೆ ಹಾಗೂ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಆರ್ ಅಶ್ವಿನ್ ಅವರಂತಹ ಬೌಲರ್ ಮೂಲಕ ಪ್ರಾಬಲ್ಯ ಸಾಧಿಸಲು ಪ್ರಯತ್ನಿಸಲಿದೆ. 

    ಪಾಕಿಸ್ತಾನ ತಂಡದಲ್ಲಿ ನಾಯಕ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಇಫ್ತಿಕರ್ ಅಹ್ಮದ್ ಮತ್ತು ಇಮಾಮ್-ಉಲ್-ಹಕ್ ಪಂದ್ಯದ ಗತಿ ತಿರುಗಿಸಬಲ್ಲಾ ಬ್ಯಾಟರ್ ಹಾಗೂ ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಹಸನ್ ಅಲಿ ಮತ್ತು ಶಾದಾಬ್ ಖಾನ್ ನೇತೃತ್ವದ ಕಠಿಣ ಬೌಲಿಂಗ್ ತಂಡವನ್ನು ಹೊಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap