ಬೆಂಗಳೂರು:
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಾದಯಾತ್ರೆಯ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.
ಅದರ ಭಾಗವಾಗಿ ರಾಮನಗರದಲ್ಲಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು ಆದರೆ ಸಂಚಾರಕ್ಕೆ ತೊಂದರೆಯಾಗುವುದರಿಂದ ಸ್ಥಳ ಬದಲಾಯಿಸುವಂತೆ ಸೂಚಿಸಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ.