ನವದೆಹಲಿ:
ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಐವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪ್ರತಿಷ್ಠಿತ ‘ಭಾರತ ರತ್ನ’ವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್, ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಚರಣ್ ಸಿಂಗ್ ಪರವಾಗಿ ಅವರ ಮೊಮ್ಮಗ ಆರ್ ಎಲ್ ಡಿ ಮುಖ್ಯಸ್ಥ ಜಯಂತ್ ಸಿಂಗ್ ಪ್ರಶಸ್ತಿ ಸ್ವೀಕರಿಸಿದರೆ, ಪಿ. ವಿ. ನರಸಿಂಹ ರಾವ್ ಪರವಾಗಿ ಅವರ ಪತ್ರ ಪಿ.ವಿ. ಪ್ರಭಾಕರ ರಾವ್ ಪ್ರಶಸ್ತಿ ಸ್ವೀಕರಿಸಿದರು.
ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಪರವಾಗಿ ಅವರ ಪುತ್ರ ರಾಮನಾಥ ಠಾಕೂರ್, ಕೃಷಿ ವಿಜ್ಞಾನಿ ಡಾ.ಎಂ. ಎಸ್. ಸ್ವಾಮಿನಾಥನ್ ಪರ ಅವರ ಪುತ್ರಿ ನಿತ್ಯಾರಾವ್ ಪ್ರಶಸ್ತಿ ಸ್ವೀಕರಿಸಿದರು.ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ