ಜೈಶ್‌ ಉಗ್ರ ಮಸೂದ್‌ ಅಜಾರ್‌ ವಿರುದ್ಧ ಕಠಿಣ ಕ್ರಮಕ್ಕೆ ಭಾರತ ಆಗ್ರಹ….!

ನವದೆಹಲಿ:

   ಸಾರ್ವಜನಿಕ ಸಭೆಯೊಂದರಲ್ಲಿ ಭಾಷಣ ಮಾಡಿರುವ ಜೈಶ್-ಎ-ಮೊಹಮ್ಮದ್  ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್  ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಪಾಕಿಸ್ತಾನಕ್ಕೆ ಭಾರತ ಒತ್ತಾಯಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಪಾಕಿಸ್ತಾನ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

   ಅಜರ್ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ನ್ಯಾಯಾಂಗಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ. ಆತ ಪಾಕಿಸ್ತಾನದಲ್ಲಿ ಇಲ್ಲವೇ ಇಲ್ಲ ಎಂದು ಅಲ್ಲಿನ ಸರ್ಕಾರ ಹೇಳುತ್ತಲೇ ಇದೆ. ಆದರೆ ಇದೀಗ ಆತ ಬಹವಾಲ್‌ಪುರದಲ್ಲಿ ಸಾರ್ವಜನಿಕ ಭಾಷಣ ಮಾಡುತ್ತಿದ್ದಾನೆ. ಇದು ಪಾಕಿಸ್ತಾನದ ದ್ವಂದ್ವ ನೀತಿಯನ್ನು ಬಯಲು ಮಾಡುತ್ತಿದೆ. ಮಸೂದ್ ಅಜರ್ ಭಾರತದ ಮೇಲಿನ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ ಮತ್ತು ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಬಯಸುತ್ತೇವೆ ಎಂದು ಜೈಸ್ವಾಲ್ ಹೇಳಿದ್ದಾರೆ.

   ಗ್ರೂಪ್‌ನ ಆನ್‌ಲೈನ್ ಡಿಜಿಟಲ್ ಪ್ಲಾಟ್‌ಫಾರ್ಮ್ ಮಂಗಳವಾರ ಘೋಷಿಸಿದಂತೆ ಜೈಶ್-ಎ-ಮೊಹಮ್ಮದ್ (JEM) ಸದಸ್ಯರಿಗೆ ಅಜರ್ 20 ವರ್ಷಗಳ ನಂತರ ತಮ್ಮ ಮೊದಲ ಭಾಷಣ ಮಾಡಿದ್ದ. ಭಾರತ ಮತ್ತು ಇಸ್ರೇಲ್‌ನಲ್ಲಿ ಭಯೋತ್ಪಾದಕ ಚಟುವಟಿಕೆಗೆ ಪ್ರಚೋದನೆ ನೀಡುತ್ತಿದ್ದಾನೆ. ಮಸೂದ್‌ ಅಜರ್ ಭಾಷಣದ ದಿನಾಂಕ ಅಥವಾ ಸ್ಥಳವನ್ನು ಬಹಿರಂಗಪಡಿಸಿಲ್ಲ.

Recent Articles

spot_img

Related Stories

Share via
Copy link