ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು :

   ನಂದಿ ಬೆಟ್ಟದಲ್ಲಿ  2 ಭಾರತೀಯ ಮೀಸಲು ಪಡೆ  ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆ ಕಾಡುವುದು ಪೊಲೀಸರ ಕರ್ತವ್ಯವಾಗಿದೆ ಎಂದು ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ  ಹೇಳಿಕೆ ನೀಡಿದರು. ಬೆಂಗಳೂರು ಮೈಸೂರು ರಸ್ತೆಯ ಸಿಇಆರ್ ಕೇಂದ್ರದಲ್ಲಿ ಈ ಕಾರ್ಯಕ್ರಮ ನಡೆಯಿತು.

   ಕರ್ತವ್ಯದ ವೇಳೆ ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸರಿಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ಹಿಂಸಾಚಾರ, ನೈತಿಕ ಪೊಲೀಸ್ ಗಿರಿ ತಡೆಗೆ ಸ್ಪೆಷಲ್ ಆಕ್ಷನ್ ಫೋರ್ಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಕಡಿಮೆಯಾಗಿದೆ. ಹಾಗಾಗಿ ಪೊಲೀಸರಿಗೆ ಅಭಿನಂದನೆ ಹೇಳುತ್ತೇನೆ ಎಂದರು.

   ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್‌ಸಿ, ಎಸ್‌ಟಿ ಜನರ ರಕ್ಷಣೆಗೆ ಡಿಸಿಆರ್‌ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಾಗಿ 10 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. 116 ಮಂದಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಲಾಗಿದೆ. ಕರ್ನಾಟಕ ಪೊಲೀಸರು ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಅವರ ಶ್ರಮ ಹಾಗೂ ಶೌರ್ಯಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Recent Articles

spot_img

Related Stories

Share via
Copy link