ಹುಬ್ಬಳ್ಳಿ
ಹಾಸನದಲ್ಲಿ ಜೆಡಿಎಸ್ ಟಿಕೆಟ್‌ಗೆ ಯಾರಿಗೆ ಎಂಬ ಗೊಂದಲ ಮುಂದುವರಿದ ಬೆನ್ನಲ್ಲೆ. ಈಗಾಗಲೇ ಹಾಸನದಿಂದ ಭವಾನಿ ರೇವಣ್ಣಗೆ ಟಿಕೆಟ್ ಕೊಡುವುದಿಲ್ಲ, ಬದಲಾಗಿ ಕಾರ್ಯಕರ್ತರಿಗೆ ಟಿಕೆಟ್ ಕೊಡುವುದಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದರು. ಮತ್ತೆ ಇದೀಗ ಈ ಸಂಬಂಧ ಹುಬ್ಬಳ್ಳಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹಾಸನದಲ್ಲಿ ಸದೃಢ ಕಾರ್ಯಕರ್ತರಿದ್ದಾರೆ, ಅವರ ನಿರ್ಧಾರ ಅಂತಿಮವಾಗಿದೆ. ಭವಾನಿಯವರು ಸ್ಪರ್ಧೆ ಮಾಡಿದರೆ ಹಾಸನದಲ್ಲಿ ಗೆಲ್ಲುವುದಿಲ್ಲ. ಅದಕ್ಕಾಗಿ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ನಗರದ ಸಿದ್ದಾರೂಢರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರತಿಕ್ರಿಯೆ ನಡೆಯುತ್ತಿದೆ. ನಾನು ನಿರಂತರವಾಗಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ. ಕೆಲವು ಸಣ್ಣ- ಪುಟ್ಟ ಸಮಸ್ಯೆಗಳಿಂದ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ ಎಂದರು.
ಎರಡು ಕ್ಷೇತ್ರಗಳಲ್ಲಿ ರೇವಣ್ಣ ಟಿಕೇಟ್ ಕೇಳಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಶಕುನಿಗಳು ನಮ್ಮ ಕುಟುಂಬವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮಹಾಭಾರತ ಕಾಲದಿಂದ ನಡೆದು ಬಂದಿದ್ದೆ ಈಗಲೂ ನಡೆಯುತ್ತಿದೆ. ನಾನು ಮೊದಲಿಂದಲೂ ಹಾಸನದ ಟಿಕೆಟ್ ಅನ್ನು ಸಾಮಾನ್ಯ ಕಾರ್ಯ ಕರ್ತರಿಗೆ ನೀಡುವುದಾಗಿ ಸೂಚನೆ ನೀಡಿದ್ದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ