ಕಿಡ್ಯ್ನಾಪ್‌ ಕೇಸ್‌ : ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್….!

ಬೆಂಗಳೂರು:

     ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

     ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಇಂದು ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠ ಸೂಚನೆ ನೀಡಿದೆ. 

     ಇನ್ನು ಜಾಮೀನು ನೀಡಿರುವ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರನ್ನು ಇಂದು ಮಧ್ಯಾಹ್ನ1 ಗಂಟೆಗೆ ಆರಂಭವಾಗಲಿರುವ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಬೇಕು. ಕೆಆರ್ ನಗರ ಪ್ರವೇಶ ಮಾಡಬಾರದು ಎಂದು ಸೂಚನೆ ನೀಡಿದೆ. 

    ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ   ಪ್ರಕರಣದಲ್ಲಿ ಭವಾನಿ ರೇವಣ್ಣ  ಅವರಿಗೆ ಹೈಕೋರ್ಟ್  ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

    ಇದೇ ವೇಳೆ ಈ ಆದೇಶವು ಜಾಮೀನಿಗಾಗಿ ಮಾತ್ರವೇ ಹೊರತು ಭವಾನಿ ಈ ಆದೇಶವನ್ನು ಸಂಭ್ರಮಿಸುವಂತಿಲ್ಲ. ಆರೋಪಿ ಭವಾನಿ ರೇವಣ್ಣ ತಪ್ಪದೇ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ನ್ಯಾಯಾಲಯವು ಕಠಿಣ ಷರತ್ತುಗಳನ್ನು ವಿಧಿಸಿದೆ.

    ಅಂತೆಯೇ ಎಸ್‌ಐಟಿ ಆಕೆಯನ್ನು ಬಂಧಿಸಬಾರದು ಎಂದು ಹೇಳಿರುವ ನ್ಯಾಯಾಲಯ ತನಿಖೆಯ ನೆಪದಲ್ಲಿ ಸಂಜೆ 5 ಗಂಟೆಯ ನಂತರ ಆಕೆಯನ್ನು ಕಚೇರಿಯಲ್ಲಿ ಉಳಿಸಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಆಕೆ ತನಿಖೆಗೆ ಹಾಜರಾಗುವವರೆಗೆ ಈ ಷರತ್ತುಗಳು ಜಾರಿಯಲ್ಲಿರುತ್ತವೆ ಎಂದು ನ್ಯಾಯಾಲಯ ತಿಳಿಸಿದೆ. 

    ಎನ್‌ಬಿಡಬ್ಲ್ಯು ಹೊರಡಿಸಿರುವುದನ್ನು ದೃಢಪಡಿಸಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಪ್ರೊ.ರವಿವರ್ಮ ಕುಮಾರ್ ಅವರು ಆರೋಪಿಯು ಅಪರಾಧದ ಮಾಸ್ಟರ್ ಮೈಂಡ್ ಆಗಿದ್ದು, ಜಿಲ್ಲೆಯಾದ್ಯಂತ ಲೈಂಗಿಕ ದೌರ್ಜನ್ಯದ ವಿಡಿಯೋಗಳು ಹರಡಿವೆ. ಆರೋಪಿ ಭವಾನಿ ಅಪರಾಧ ದಾಖಲಾಗಿರುವ ಕೆಆರ್ ನಗರ ತಾಲೂಕು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತುಗಳನ್ನು ವಿಧಿಸಬೇಕು ಎಂದು ವಾದಿಸಿದರು.

   ಎಸ್‌ಪಿಪಿ ಅವರ ಮನವಿಯನ್ನು ಸ್ವೀಕರಿಸಿದ ನ್ಯಾಯಾಲಯವು ಆರೋಪಿಗಳು ಮೈಸೂರು ಜಿಲ್ಲೆ ಮತ್ತು ಹಾಸನ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಪ್ರವೇಶಿಸಬಾರದು ಎಂದು ಷರತ್ತು ವಿಧಿಸಿದೆ

   ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್​ಐಟಿ ಬಂಧಿಸಿದೆ.

     ಇವರನ್ನು ಆರೋಪಿ ಸಂಖ್ಯೆ 2 ಎಂದು ಎಸ್​ಐಟಿ ಗುರುತಿಸಿದ್ದು, ಹೆಚ್​ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಇದೇ ಕೇಸ್ ಈಗ ಭವಾನಿ ರೇವಣ್ಣಗೆ ಉರುಳಾಗಿ ಪರಿಣಮಿಸಿದ್ದು, ಯಾವುದೇ ಕ್ಷಣದಲ್ಲಿ ಭವಾನಿ ರೇವಣ್ಣರನ್ನು ಅಧಿಕಾರಿಗಳು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap