ವದಂತಿಗಳ ನಡುವೆ ಫಡ್ನವೀಸ್ ಭೇಟಿಯಾದ ಭುಜಬಲ್

ಮುಂಬೈ:

    ಮಹಾರಾಷ್ಟ್ರದ ನೂತನ ಮಹಾಯುತಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ಎನ್‌ಸಿಪಿ ಹಿರಿಯ ನಾಯಕ ಛಗನ್ ಭುಜಬಲ್ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳ ನಡುವೆ ಸೋಮವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ.

   ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭುಜಬಲ್, ರಾಜ್ಯದಲ್ಲಿ ಚಾಲ್ತಿಯಲ್ಲಿರುವ ರಾಜಕೀಯ ಮತ್ತು ಸಾಮಾಜಿಕ ವಾತಾವರಣದ ಕುರಿತು ಸಿಎಂ ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದೇನೆ ಎಂದರು.

    ಮುಂಬೈನ ‘ಸಾಗರ್’ ಬಂಗಲೆಯಲ್ಲಿ ಫಡ್ನವಿಸ್ ಅವರೊಂದಿಗೆ ಸುಮಾರು 30 ನಿಮಿಷಗಳ ಭೇಟಿಯ ಸಂದರ್ಭದಲ್ಲಿ ಮಾಜಿ ಸಚಿವ ಭುಜಬಲ್ ಅವರೊಂದಿಗೆ ಅವರ ಸೋದರಳಿಯ ಸಮೀರ್ ಭುಜಬಲ್ ಇದ್ದರು. “ವಿಧಾನಸಭಾ ಚುನಾವಣೆಯಲ್ಲಿ(ನವೆಂಬರ್ 20 ರಂದು ನಡೆದ) ಮಹಾಯುತಿಯ ಪ್ರಚಂಡ ಗೆಲುವಿನಲ್ಲಿ ಇತರ ಹಿಂದುಳಿದ ವರ್ಗಗಳು ಪ್ರಮುಖ ಪಾತ್ರ ವಹಿಸಿದ್ದಾರೆ ಮತ್ತು ಒಬಿಸಿ ಸಮುದಾಯದ ಹಿತಾಸಕ್ತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದಾಗಿ ಫಡ್ನವಿಸ್ ನನಗೆ ಭರವಸೆ ನೀಡಿದ್ದಾರೆ” ಎಂದು ಛಗನ್ ಭುಜಬಲ್ ತಿಳಿಸಿದರು.

    ಒಬಿಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಯೋಚಿಸಲು ಫಡ್ನವಿಸ್ ಸ್ವಲ್ಪ ಸಮಯ ಕೇಳಿದ್ದಾರೆ ಎಂದು ಅವರು ಹೇಳಿದರು.ಇತರೆ ಹಿಂದುಳಿದ ವರ್ಗ (ಕುಂಬಿ) ವರ್ಗದಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ಕಾರ್ಯಕರ್ತ ಮನೋಜ್ ಜಾರಂಗೆ ಅವರ ಬೇಡಿಕೆಗೆ ಒಬಿಸಿ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಭುಜಬಲ್ ಕೂಡ ಈ ಬೇಡಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

   ನೀವು ಬಿಜೆಪಿ ಸೇರಲು ಯೋಜಿಸುತ್ತಿದ್ದೀರಾ ಎಂಬ ಪ್ರಶ್ನೆಗೆ, ಛಗನ್ ಭುಜಬಲ್ ಪ್ರತಿಕ್ರಿಯಿಸಲು ನಿರಾಕರಿಸಿದರು ಮತ್ತು ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮನ್ನು ನಿರ್ಲಕ್ಷಿಸಿರುವ ವಿಷಯದ ಬಗ್ಗೆ ಈಗಾಗಲೇ ಹೇಳಿದ್ದೇನೆ ಎಂದರು.

 

Recent Articles

spot_img

Related Stories

Share via
Copy link