ಬಿಗ್ ಬಾಸ್​ಗೆ ನಿರ್ಮಾಣ ಆಗಿದೆ ಬೇರೆಯದೇ ಮನೆ

ಬೆಂಗಳೂರು :

   ಬಿಗ್ ಬಾಸ್ ಕನ್ನಡ ಸೀಸನ್ 12’ ಆರಂಭಕ್ಕೆ ಉಳಿದಿರೋದು ಇನ್ನು ಕೆಲವೇ ವಾರಗಳು ಮಾತ್ರ. ಆಗಲೇ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರೆಲ್ಲ ಇರಬಹುದು ಎನ್ನುವ ಬಗ್ಗೆ ಚರ್ಚೆಗಳು ಶುರುವಾಗಿವೆ. ಅಷ್ಟೇ ಅಲ್ಲ, ಕೆಲವರು ಹೆಸರು ಲೀಕ್ ಆಗಿದೆ. ಈ ಮಧ್ಯೆ ಈ ಬಾರಿಯ ಬಿಗ್ ಬಾಸ್  ಮನೆ ಹೇಗೆ ಇರಲಿದೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಮಾಡಿದ ಟ್ವೀಟ್​ನಲ್ಲಿ ಉತ್ತರ ಸಿಕ್ಕಿದೆ.

   ಈ ಮೊದಲು ಬಿಗ್ ಬಾಸ್ ಮನೆ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆ ಬಳಿಕ ಈ ಮನೆಯನ್ನು ಬೇರೆ ಕಡೆಗಳಲ್ಲಿ ಶಿಫ್ಟ್ ಮಾಡಲಾಯಿತು. ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಜಾಗ ಪಡೆದು ಅಲ್ಲಿ ದೊಡ್ಡದಾದ ಮನೆ ನಿರ್ಮಾಣ ಮಾಡಲಾಯಿತು. ಆದರೆ, ಕಳೆದ ಬಾರಿ ಕೆಲವರು ಈ ಮನೆಯ ವಿಚಾರಕ್ಕೆ ಅಪಸ್ವರ ತೆಗೆದಿದ್ದರು. ಈ ವಿಚಾರ ಕೋರ್ಟ್ ಮೆಟ್ಟಿಲು ಕೂಡ ಹತ್ತಿತ್ತು.

    ಈ ಬಾರಿ ಆ ರೀತಿ ಆಗಲೇಬಾರದು ಎಂದು ನಿರ್ಧರಿಸಿದಂತಿದೆ. ಈ ಕಾರಣದಿಂದಲೇ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲೇ ಮತ್ತೆ ಮನೆ ನಿರ್ಮಾಣ ಆಗಿದೆ. ಇದಕ್ಕೆ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಈ ಬಾರಿಯ ಮನೆ ದೊಡ್ಡದಾಗಿ ಹಾಗೂ ಭಿನ್ನ ರೀತಿಯಲ್ಲಿ ಇರಲಿದೆಯಂತೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಹಿಂಟ್ ಕೊಟ್ಟಿದ್ದಾರೆ. 

   ‘ಪ್ರೋಮೋ ವಿಷಯದಲ್ಲಿ ಬಿಗ್ ಬಾಸ್ ತಂಡ ನಿಜಕ್ಕೂ ತನ್ನ ಸೃಜನಶೀಲತೆಯನ್ನು ತೋರಿಸಿದೆ. ಬಿಡುಗಡೆಯಾಗಲಿರುವ ಎರಡನೇ ಪ್ರೋಮೋ ಇನ್ನೂ ಉತ್ತಮವಾಗಿದೆ. ಈ ಬಾರಿ ದೊಡ್ಡ ಮತ್ತು ಉತ್ತಮ ವೇದಿಕೆ, ಮತ್ತು ಹೆಚ್ಚು ಬೆಚ್ಚಗಿನ ಮತ್ತು ಪ್ರಕಾಶಮಾನವಾದ ಬಿಗ್ ಬಾಸ್ ಮನೆ. ಈ ಸೀಸನ್​ನಲ್ಲಿ ಬಹಳ ವಿಷಯಗಳಿವೆ’ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಸೆಪ್ಟೆಂಬರ್ 28ರಿಂದ ಬಿಗ್ ಬಾಸ್ 12 ಆರಂಭ ಆಗುತ್ತಿದೆ.

Recent Articles

spot_img

Related Stories

Share via
Copy link