‘ಸಿಡಿ ಪ್ರಕರಣ’ದಲ್ಲಿ ‘ಶಾಸಕ ರಮೇಶ್ ಜಾರಕಿಹೊಳಿ’ಗೆ ಬಿಗ್ ರಿಲೀಫ್: SITಯಿಂದ ನ್ಯಾಯಾಲಯಕ್ಕೆ ‘ಬಿ-ರಿಪೋರ್ಟ್’ ಸಲ್ಲಿಕೆ

ಬೆಂಗಳೂರು:BIGG BREAKING NEWS: 'ಸಿಡಿ ಪ್ರಕರಣ'ದಲ್ಲಿ 'ಶಾಸಕ ರಮೇಶ್ ಜಾರಕಿಹೊಳಿ'ಗೆ ಬಿಗ್ ರಿಲೀಫ್: SITಯಿಂದ ನ್ಯಾಯಾಲಯಕ್ಕೆ 'ಬಿ-ರಿಪೋರ್ಟ್' ಸಲ್ಲಿಕೆ | MLA Ramesh Jarkiholi

                       ರಾಜ್ಯ ರಾಜಕೀಯದಲ್ಲಿ ಸಂಚಲವನ್ನೇ ಸೃಷ್ಠಿಸಿದ್ದಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ  ಸಿಡಿ ಪ್ರಕರಣಕ್ಕೆ ಈಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತನಿಖೆ ನಡೆಸುತ್ತಿದ್ದಂತ ಎಸ್‌ಐಟಿ ಅಧಿಕಾರಿಗಳು ಈಗ ನ್ಯಾಯಾಲಯಕ್ಕೆ ಬಿ-ರಿಪೋರ್ಸ್ ಸಲ್ಲಿಸಿರೋದಾಗಿ ತಿಳಿದು ಬಂದಿದೆ.

ಹೀಗಾಗಿ ಶಾಸಕ ರಮೇಶ್ ಜಾರಕಿಹೊಳಿಗೆ ಸಿಡಿ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಸಂಬಂಧ ವಿವಿಧ ಹಂತದಲ್ಲಿ ತನಿಖೆ ನಡೆಸಿದ್ದಂತ ವಿಶೇಷ ತನಿಖಾಧಿಕಾರಿಗಳ ತಂಡ (ಎಸ್‌ಐಟಿ ) ನ್ಯಾಯಾಲಯಕ್ಕೆ ನಿನ್ನೆ ತನಿಖಾವರದಿ ಸಲ್ಲಿಸೋದಕ್ಕೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ್ದಂತ ನ್ಯಾಯಾಲಯವು ಅನುಮತಿ ನೀಡಿತ್ತು. ಈ ಹಿನ್ನಲೆಯಲ್ಲಿ ಇಂದು ಎಸ್‌ಐಟಿ ತನಿಖಾಧಿಕಾರಿಗಳಿಂದ ನಗರದ 1ನೇ ಎಸಿಎಂಎಂ ಕೋರ್ಟ್ ಗೆ ವರದಿಯನ್ನು ಸಲ್ಲಿಸಿದೆ.

ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿಗಳಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಎಸ್‌ಐಟಿ ಅಧಿಕಾರಿಗಳಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ ಕಾರಣದಿಂದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap