ಕೇಂದ್ರ ಸಚಿವ ವಿ ಸೋಮಣ್ಣಗೆ ಕರ್ನಾಟಕ ಸರ್ಕಾರದಿಂದ ಬಿಗ್‌ ಷಾಕ್‌ …!

ತುಮಕೂರು

   ಬಿಜೆಪಿ ಮತ್ತು ಜೆಡಿಎಸ್​​ ನಾಯಕರು ಸರ್ಕಾರವನ್ನು ಟಾರ್ಗೆಟ್​​ ಮಾಡಿದ್ದರಿಂದ ಇತ್ತ ಕಾಂಗ್ರೆಸ್ ನಾಯಕರು ಸಹ ಸಿಕ್ಕ ಸಿಕ್ಕ ಕಡೆಗಳಲ್ಲಿ ತಿರುಗೇಟು ನೀಡುತ್ತಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಅಧಿಕಾರಿಗಳು ಹೋಗದಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದೀಗ ಕೇಂದ್ರ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅವರಿಗೆ ನೀಡಲಾಗಿದ್ದ ಕಚೇರಿಯನ್ನು ವಾಪಸ್ ಪಡೆದುಕೊಂಡಿದೆ. ಹಳೇ ಪರಿವೀಕ್ಷಣಾ ಮಂದಿರದಲ್ಲಿ ಸೋಮಣ್ಣ ಅವರು ಕಚೇರಿ ಉಪಯೋಗಕ್ಕೆ ಪಡೆದುಕೊಂಡಿದ್ದರು. ಆದ್ರೆ, ಇದೀಗ ಅದು ಉದ್ಘಾಟನೆಗೆ ಸಿದ್ಧವಿರುವಾಗಲೇ ರಾಜ್ಯ ಸರ್ಕಾರ ಕಚೇರಿಯನ್ನು ವಾಪಸ್ ಪಡೆದುಕೊಂಡಿದೆ.

   ತುಮಕೂರಿನ ರೈಲ್ವೆ ನಿಲ್ದಾಣ ಬಳಿಯಿರುವ ಹಳೇ ಐಬಿಯನ್ನ ಸೋಮಣ್ಣ ಅವರ ಕಚೇರಿ ಉಪಯೋಗಕ್ಕೆ ನೀಡಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನೂತನ ಕಚೇರಿ ಎಂದು ಫರ್ನಿಚರ್ಸ್, ವುಡ್ ವರ್ಕ್ ಹಾಗೂ ಟೇಬಲ್ ಚೇರಗಳನ್ನ ಹಾಕಿಸಿದ್ದರು. ಅಲ್ಲದೇ ನಾಡಿದ್ದು ಅಂದರೆ 18-8-24ರ ಭಾನುವಾರದಂದು ಕಚೇರಿ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿತ್ತು. ಆದ್ರೆ, ಕಚೇರಿ ಉದ್ಘಾಟನೆಗೆ ಎರಡು ದಿನ ಬಾಕಿ ಇರುವಾಗಲೇ ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ. ಈ ಮೂಲಕ ಸೋಮಣ್ಣಗೆ ಬಗ್ ಶಾಕ್ ಕೊಟ್ಟಿದೆ.

  ನಾಲ್ಕು ಕೊಠಡಿಗಳನ್ನ ಸೋಮಣ್ಣರಿಗೆ ನೀಡಲಾಗಿತ್ತು. ಸರ್ಕಾರ ಒಪ್ಪಿಗೆ ನೀಡಿದ ಬಳಿಕ ಪರಿವೀಕ್ಷಣಾ ಮಂದಿರದ ನಾಲ್ಕು ಕೊಠಡಿಗಳನ್ನ ಉನ್ನತೀಕರಣ ಮಾಡಿಸಿದ್ದರು. ಆದ್ರೆ, ಕಚೇರಿ ಉಪಯೋಗಕ್ಕೆ ನೀಡಿದ ಅನುಮೋದನೆ ಈ ಕೂಡಲೇ ಹಿಂಪಡೆಯುವಂತೆ ತುಮಕೂರು ಜಿಲ್ಲಾಧಿಕಾರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಶೇಖರ್ ಸೂಚನೆ ನೀಡಿದ್ದಾರೆ.

Recent Articles

spot_img

Related Stories

Share via
Copy link