60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಬಿಗ್ ಶಾಕ್!

ಬೆಂಗಳೂರು :

60 ವರ್ಷ ಮೀರಿದ ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಿಗ್ ಶಾಕ್ ನೀಡಿದ್ದು, ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬಂದಿಯನ್ನು ಕಡ್ಡಾಯವಾಗಿ ಕೆಲಸದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ (2022ರ ಮಾ.31ಕ್ಕೆ 60 ವರ್ಷ ಪೂರ್ಣಗೊಳಿಸಿರುವ ಅಡುಗೆ ಸಿಬ್ಬಂದಿ) ಅಡುಗೆ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

1 ಕೆಜಿ ಅಕ್ಕಿ 500, ಅರ್ಧ ಲೀಟರ್ ಹಾಲು 790 ರೂ.!

ಇದೇ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿ, 60 ವರ್ಷ ಪೂರ್ಣಗೊಳಿಸಿದವರನ್ನು ಕಡ್ಡಾಯವಾಗಿ ಅಡುಗೆ ಕರ್ತವ್ಯದಿಂದ ಬಿಡುಗಡೆಗೊಳಿಸುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಈ ನಿರ್ಧಾರದಿಂದ ಅಂದಾಜು 3,000 ಅಡುಗೆ ಸಿಬ್ಬಂದಿ ಕೆಲಸ ಬಿಡಬೇಕಾಗಿದೆ.

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap