ಮನೆ ಕಟ್ಟೋರಿಗೆ ಬಿಗ್ ಶಾಕ್ : ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು :

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್, ಕಬ್ಬಿಣ, ಸಿಮೆಂಟ್ ಸೇರಿದಂತೆ ಮನೆ ನಿರ್ಮಾಣದ ಹಲವು ವಸ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.ಜಿಎಸ್‌ಟಿ ಮತ್ತು ಇಂಧನ ದರ ಏರಿಕೆಯಿಂದ ನಿರ್ಮಾಣ ಪರಿಕರಗಳ ಬೆಲೆಯೂ ಏರಿಕೆಯಾಗಿದ್ದ.

ಉಕ್ರೇನ್‌ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ: ಬೈಡನ್ ಜೊತೆಗಿನ ಸಭೆಯಲ್ಲಿ ಮೋದಿ

ಹಿಂದಿನ ವರ್ಷ ಶೇ 40ರಿಂದ ಶೇ 50ರಷ್ಟು ಹೆಚ್ಚಳವಾಗಿದ್ದ ದರ, ಈಗ ಮತ್ತೆ ಶೇ 15ರಿಂದ ಶೇ 20ರಷ್ಟು ಹೆಚ್ಚಾಗಿದೆ. ಸಾಧಾರಣ ದರ್ಜೆಯ 10 ಚದರ ಮನೆ ನಿರ್ಮಾಣಕ್ಕೆ ಒಂದು ವರ್ಷದ ಹಿಂದೆ 15 ಲಕ್ಷ ಇದ್ದ ನಿರ್ಮಾಣ ವೆಚ್ಚ 2021ರ ನವೆಂಬರ್ ವೇಳೆಗೆ 20 ಲಕ್ಷ ದಾಟಿತ್ತು. ಈಗ 25 ಲಕ್ಷ ಮೀರಿದೆ ಎಂದು ಅಂದಾಜಿಸಲಾಗಿದೆ.

ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಮೂರು ಪಟ್ಟು ಹೆಚ್ಚಳ; ಶಾಲೆ ಬಂದ್

ಇನ್ನು ಮನೆಯ ಒಳಾಂಗಣಕ್ಕೆ ಬಳಸುವ ಟೈಲ್ಸ್, ಸ್ಯಾನಿಟರಿ ಸಲಕರಣೆ, ಬಣ್ಣ, ಎಲೆಕ್ಟ್ರಿಕಲ್ ವಸ್ತುಗಳು ಬೆಲೆಯಲ್ಲಿಯೂ ಏರಿಕೆಯಾಗಿದ್ದು, ಕಬ್ಬಿಣದ ಬೆಲೆ 1 ಟನ್ ಗೆ 90 ಸಾವಿರ ರೂ. ದಿಂದ 99 ಸಾವಿರ ರೂ. ತನಕ ಏರಿಕೆಯಾಗಿದೆ. ಸಿಮೆಂಟ್‌ ದರವೂ ಚೀಲಕ್ಕೆ 50 ರೂ. ಹೆಚ್ಚಾಗಿದೆ.

ಭಾರತದಲ್ಲಿನ ‘ಮಾನವ ಹಕ್ಕುಗಳ ಉಲ್ಲಂಘನೆ’ಯನ್ನು ಯುಎಸ್ ಗಮನಿಸುತ್ತಿದೆ: ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್

        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap