ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ. ಬಿಜೆಪಿ ಶಾಸಕ ಅಭಯ ಪಾಟೀಲ್ ಆಪ್ತ ಸದಸ್ಯರ ಸದಸ್ಯತ್ವವೇ ರದ್ದಾಗಿದೆ. ಸದಸ್ಯತ್ವ ರದ್ದು ಮಾಡಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ವಾರ್ಡ್ ನಂಬರ 41 ರ ಸದಸ್ಯ ಮಂಗೇಶ್ ಪವಾರ್, ವಾರ್ಡ್ ನಂಬರ್ 23ರ ಸದಸ್ಯ ಜಯಂತ್ ಜಾಧವ ಅವರೇ ಸದಸ್ಯತ್ವ ರದ್ದಾದವರು.ಲೋಕೋಪಯೋಗಿ ಇಲಾಖೆ ನಿರ್ಮಿಸಿದ್ದ ತಿನಿಸುಕಟ್ಟೆಯಲ್ಲಿ ಬಿಜೆಪಿ ಸದಸ್ಯರು ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದರು ಎನ್ನಲಾಗಿದೆ. ಪತ್ನಿ ನೀತಾ ಹೆಸರಿನಲ್ಲಿ ಮಂಗೇಶ್ ಪವಾರ, ಪತ್ನಿ ಸೋನಾಲಿ ಹೆಸರಿನಲ್ಲಿ ಜಯಂತ್ ಜಾಧವ ಮಳಿಗೆ ಪಡೆದಿದ್ದರು. ತಮ್ಮ ಪ್ರಭಾವ ಬೀರಿ ಪತ್ನಿಯರ ಹೆಸರಿನಲ್ಲಿ ಮಳಿಗೆ ಪಡೆದಿದ್ದಾರೆಂದು ಸುಜೀತ್ ಮುಳಗುಂದ ದೂರು ನೀಡಿದ್ದರು. ಈ ದೂರು ಆಧರಿಸಿ ಸುಧೀರ್ಘ ವಿಚಾರಣೆ ನಡೆಸಿ ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು ಮಾಡಲಾಗಿದೆ.
ಇತ್ತೀಚಗೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇದೀಗ ಮನೆಯಿಂದಲೇ ಕಾರ್ಯ ನಿರ್ವಹಣೆ ಆರಂಭಿಸಿದ್ದಾರೆ. ಕರ್ನಾಟಕವಬಜೆಟ್ ಹಿನ್ನೆಲೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ್ದಾರೆ.
ಸದ್ಯ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಅವರು ಸಿಎಂ ಸಿದ್ದರಾಮಯ್ಯ ಜತೆ ಸೋಮವಾರ ವಿಡಿಯೋ ಸಂವಾದದ ಮೂಲಕ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದರು. ಹೆಬ್ಬಾಳ್ಕರ್ ಬೆಳಗಾವಿಯ ಕುವೆಂಪು ನಗರದಲ್ಲಿರುವ ಗೃಹ ಕಚೇರಿಯಲ್ಲೇ ಇಲಾಖೆ ಕಾರ್ಯ ನಿಭಾಯಿಸುತ್ತಿದ್ದಾರೆ.
