ಬಿಹಾರದ ಮಾಜಿ ಡಿಸಿಎಂ ನಿಧನ…..!

ನವದೆಹಲಿ:

    ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಆರು ತಿಂಗಳ ಹಿಂದೆಯೇ ತಮಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು ಎಂದು ಹೇಳಿಕೊಂಡಿದ್ದ ಸುಶೀಲ್ ಕುಮಾರ್ ಮೋದಿ ಅವರು, ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿರಲಿಲ್ಲ. ಅವರನ್ನು ಬಿಜೆಪಿ ತನ್ನ ರಾಜ್ಯದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರು ಮತ್ತು ಚುನಾವಣಾ ಪ್ರಣಾಳಿಕೆ ಸಮಿತಿಯ ಸದಸ್ಯ ಎಂದು ಹೆಸರಿಸಿತ್ತು.

   “ಕಳೆದ ಆರು ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಈಗ, ಅದರ ಬಗ್ಗೆ ಜನರಿಗೆ ತಿಳಿಸುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ. ಲೋಕಸಭೆ ಚುನಾವಣೆಗೆ ನಾನು ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಮೂರು ದಶಕಗಳ ಕಾಲದ ಅವರ ರಾಜಕೀಯ ಜೀವನದಲ್ಲಿ, ಶಾಸಕ, ಎಂಎಲ್‌ಸಿ, ಲೋಕಸಭಾ ಸದಸ್ಯ ಮತ್ತು ರಾಜ್ಯಸಭಾ ಸಂಸದರಾಗಿ ಕಾರ್ಯ ನಿರ್ವಹಿಸಿದ್ದರು.

   2005 ರಿಂದ 2013 ಮತ್ತು 2017 ರಿಂದ 2020ರವರೆಗೆ ಅವರು ಎರಡು ಅವಧಿಗೆ ಡಿಸಿಎಂ ಆಗಿದ್ದರು. ಪಾಟ್ನಾ ವಿಶ್ವವಿದ್ಯಾನಿಲಯದಲ್ಲಿ ಓದುವಾಗ ವಿದ್ಯಾರ್ಥಿ ದೆಸೆಯಿಂದಲೇ ರಾಜಕೀಯಕ್ಕೆ ಸೇರಿದರು ಮತ್ತು 1973 ರಲ್ಲಿ ಅದರ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, 1990ರಲ್ಲಿ ಪಾಟ್ನಾ ಸೆಂಟ್ರಲ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

   1996 ರಿಂದ 2004 ರವರೆಗೆ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು. 2004 ರಲ್ಲಿ ಭಾಗಲ್ಪುರದಿಂದ ಲೋಕಸಭೆಯ ಸದಸ್ಯರಾಗಿದ್ದ ಅವರು 2005 ರಲ್ಲಿ ತಮ್ಮ ಲೋಕಸಭಾ ಸದಸ್ಯತ್ವವನ್ನು ತ್ಯಜಿಸಿ, ವಿಧಾನ ಪರಿಷತ್ತಿನ ಸದಸ್ಯರಾದರು. ನಂತರ ಸಿಎಂನಿತೀಶ್ ಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2020 ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು ಈ ವರ್ಷದ ಆರಂಭದಲ್ಲಿ ನಿವೃತ್ತರಾಗಿದ್ದರು.

   ಸುಶೀಲ್ ಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap