ಮತ ಹಾಕುವಂತೆ ಜನರನ್ನು ಬಿಜೆಪಿ ಬೆದರಿಸುತ್ತಿದೆ : ಕಾಂಗ್ರೆಸ್

ಬೆಂಗಳೂರು:

    ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ  ಅಮಿತ್ ಶಾ  ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಅವರು ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

     ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆಯ ರಣಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೋಮು ಗಲಭೆಗಳು ಸೃಷ್ಟಿಯಾಗಲಿವೆ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.

    “ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

 

    ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಲಾಗಿದೆ.

    ಸ್ವತಃ ಗೃಹ ಮಂತ್ರಿಯಿಂದಲೇ ಕೋಮು ದ್ವೇಷದ ಭಾಷಣ ಹೊರಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿವೆ ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ”. ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಅಮಿತ್ ಶಾ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap