ರಸ್ತೆ ಅಪಘಾತ: ಬೈಕ್ ಸವಾರ ಸಾವು….!

ದಾವಣಗೆರೆ:

   ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ತೋಳಹುಣಿಸೆ ರೈಲ್ವೆ ಮೇಲ್ಸೇತುವೆ ಮೇಲೆ ಶನಿವಾರ ನಡೆದಿದೆ.
ತಾಲೂಕಿನ ಬುಳ್ಳಾಪುರ ಗ್ರಾಮದ ಪ್ರದೀಪ್(೨೦) ಮೃತಪಟ್ಟ ಬೈಕ್ ಸವಾರ. ಶನಿವಾರ ಬೆಳಗ್ಗೆ ಬುಳ್ಳಾಪುರ ಗ್ರಾಮದಿಂದ ಬೈಕ್‌ನಲ್ಲಿ ದಾವಣಗೆರೆಗೆ ಬರುವ ವೇಳೆ ಸ್ಕೂಲ್ ಬಸ್ಸೊಂದು ಬೈಕ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ: ಈ ಘಟನೆ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಎಸ್.ಬಸವಂತಪ್ಪ ರೈಲ್ವೆ ಮೇಲ್ಸೇತುವೆ ಪರಿಶೀಲನೆ ನಡೆಸಿದರು. ರೈಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ಸಾಕಷ್ಟು ಸಾವು-ನೋವು ಸಂಭವಿಸುತ್ತಿವೆ. ಮೇಲ್ಸೇತುವೆ ಮೇಲೆ ಗುಂಡಿಗಳು ಬಿದ್ದಿದ್ದು, ಇದರಿಂದ ಬೈಕ್ ಸವಾರರು, ವಾಹನಗಳ ಸವಾರರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಧಿಕಾರಿಗಳು ಮೇಲ್ಸೇತುವೆ ದುರಸ್ತಿಗೊಳಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಸೂಚನೆ ನೀಡಿದ್ದಾರೆ.

Recent Articles

spot_img

Related Stories

Share via
Copy link