ಬಿಟ್‌ ಕಾಯಿನ್‌ ಹಗರಣಕ್ಕೆ ಶೀಘ್ರವೇ ಅಂತ್ಯ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು

      ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿಗೆ ಕಾಂಗ್ರೆಸ್‌ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿ ಘೋಷಣೆಗಳು ಸಹ ಪ್ರಮುಖವಾಗಿದದ್ದು, ಸರ್ಕಾರ ರಚನೆಯ ಬಳಿಕ ಪಿ ಎಸ್‌ ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

     ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ.

   ಸೋಮವಾರದಿಂದ ಅಧಿವೇಶನ ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟ್‌ ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು ಎಂದು ಹೇಳಿದರು.

     ಅನಕ್ಷರಸ್ಥ ಪ್ರಧಾನಿಯಿಂದ ಜನತೆಗೆ ತೊಂದರೆಯಾಗ್ತಿದೆ ಎಂದು ಮೋದಿ ವಿರುದ್ಧ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ಇನ್ನೂ ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು.

     ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು. ನನ್ನ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap