ಸ್ಥಳಿಯ ಚುನಾವಣೆ ಕಡೆ ಗಮನ ಹರಿಸಿದ ಬಿಜೆಪಿ …..!

ಬೆಂಗಳೂರು:

    ಲೋಕಸಭೆ ಚುನಾವಣೆ ಪೂರ್ಣಗೊಂಡಿದ್ದು, ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. ಇದರಂತೆ ಜಿಲ್ಲಾ ಘಟಕಗಳ ಪುನಶ್ಚೇತನಗೊಳಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

   ಎಂಟು ಲೋಕಸಭಾ ಸ್ಥಾನಗಳಲ್ಲಿ ಸೋತಿರುವ ಬಗ್ಗೆ ಪ್ರತಿಕ್ರಿಯೆ ಪಡೆಯಲು ಪಕ್ಷವು ಪ್ರಯತ್ನ ನಡೆಸುತ್ತಿದ್ದು, ಸಮಿತಿ ರಚಿಸಲು ಮುಂದಾಗಿದೆ. ಈ ಸಮಿತಿಯು ಆಯಾ ಜಿಲ್ಲಾ ಘಟಕಗಳಿಗೆ ಭೇಟಿ ನೀಡಿ, ಸೋಲಿಗೆ ಕಾರಣಗಳ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

    ಈ ಭೇಟಿಗಳ ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ತಂಡ ಜಿಲ್ಲಾ ಘಟಕಗಳನ್ನು ಪುನಶ್ಚೇತನಗೊಳಿಸಲು ಮುಂದಾಗಲಿದ್ದಾರೆಂದು ಹೇಳಲಾಗುತ್ತಿದೆ.

   ವಿಜಯೇಂದ್ರ ಅವರು ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಕೆಲವು ಜಿಲ್ಲಾಧ್ಯಕ್ಷರನ್ನು ಬದಲಾಯಿಸಿದ್ದಾರೆ. ಆದರೂ ಹಲವು ಘಟಕಗಳು ಒಂದೇ ಪದಾಧಿಕಾರಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎನ್ನಲಾಗಿದೆ. ಅವಧಿ ಮುಗಿದರೂ ಅವರನ್ನು ಮುಂದುವರಿಸಲಾಗುತ್ತಿದ್ದು, ಇವರು ಉತ್ಸಾಹದಿಂದ ಕೆಲಸ ಮಾಡುತ್ತಿಲ್ಲ ಎಂದು ದಕ್ಷಿಣ ಜಿಲ್ಲಾ ಘಟಕದ ಪದಾಧಿಕಾರಿಯೊಬ್ಬರು ದೂರಿದ್ದಾರೆ.

   ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಮಾತನಾಡಿ, ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ಜಿಲ್ಲಾ ಘಟಕಗಳೆಲ್ಲವೂ ಪುನರುಜ್ಜೀವನಗೊಂಡವು. ವಿಜಯೇಂದ್ರ ಅವರು ತಮ್ಮ ವಿವೇಚನೆಗೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆಂದು ಹೇಳಿದ್ದಾರೆ.

   ಹಲವು ಜಿಲ್ಲೆಗಳ ಪದಾಧಿಕಾರಿಗಳು ಬದಲಾವಣೆಗೆ ಮುಂದಾಗಿದ್ದು, ಸಭೆಗೆ ಕರೆದ ನಂತರ ವಿಜಯೇಂದ್ರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ರವಿಕುಮಾರ್ ಹೇಳಿದ್ದಾರೆ.

   ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗಳಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಬೇಕಿದ್ದು, ಪರಿಣಾಮಕಾರಿ ಪದಾಧಿಕಾರಿಗಳ ತಂಡ ಮುಖ್ಯ ಎಂದು ತಿಳಿಸಿದ್ದಾರೆ.ಜಿಲ್ಲಾ ಮತ್ತು ಮಂಡಲ ಮಟ್ಟದ ಪದಾಧಿಕಾರಿಗಳ ಸ್ಥಾನಕ್ಕೆ ಹೊಸ ಮುಖಗಳನ್ನು ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

   ಬಿಜೆಪಿ ರಾಜ್ಯ ಘಟಕದ ಮಾಜಿ ಪದಾಧಿಕಾರಿಯೊಬ್ಬರು ಮಾತನಾಡಿ, ಹಲವು ಸ್ಥಳಗಳಲ್ಲಿ ಘಟಕಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ. ಇದರಿಂದ ಬಿಜೆಪಿ ಒಂಬತ್ತು ಸ್ಥಾನಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಸಮಸ್ಯೆಯನ್ನು ಎಷ್ಟು ಬೇಗ ಪರಿಹರಿಸಲಾಗುತ್ತದೆಯೋ ಅಷ್ಟು ಒಳ್ಳೆಯದು ಎಂದು ಹೇಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap