BJP ಮತ್ತು RSS ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿವೆ : ರಾಹುಲ್‌ ಗಾಂಧಿ

ಭಾಲ್ಕಿ

      ಆಡಳಿತಾರೂಢ ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿವೆ. ದೇಶದಲ್ಲಿ ದ್ವೇಷ ಹಾಗೂ ಹಿಂಸಾಚಾರವನ್ನು ಹರಡುತ್ತಿವೆ ಎಂದು ಕಾಂಗ್ರೆಸ್   ನಾಯಕ ರಾಹುಲ್ ಗಾಂಧಿ   ಸೋಮವಾರ ಆರೋಪಿಸಿದರು.

      ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕನಿಷ್ಠ 150 ಸ್ಥಾನಗಳನ್ನು ಗೆದ್ದು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರುವಂತೆ ಜನರು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು ಎಂದು ರಾಹುಲ್‌ ಮನವಿ ಮಾಡಿದರು.

     ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ನಡೆದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಬೀದರ್ ಬಸವಣ್ಣನವರ ಕರ್ಮಭೂಮಿ. ಯಾರಾದರೂ ಮೊದಲು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ ಪ್ರಜಾಪ್ರಭುತ್ವದ ಹಾದಿ ತೋರಿಸಿದ್ದಾರೆಂದರೆ ಅದು ಬಸವಣ್ಣ. ಇಂದು ದೇಶಾದ್ಯಂತ ಆರೆಸ್ಸೆಸ್ ಮತ್ತು ಬಿಜೆಪಿಯವರು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿರುವುದು ಬೇಸರದ ಸಂಗತಿ’ ಎಂದು ರಾಹುಲ್‌ ಗಾಂಧಿ ಹೇಳಿದರು.
      ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಸವಣ್ಣನವರ ಆದರ್ಶಗಳಾದ ಸಮಾನ ಪಾಲುದಾರಿಕೆ, ಸಮಾನ ಅವಕಾಶಗಳ ಮೇಲೆ ದಾಳಿ ನಡೆಸುತ್ತಿದ್ದು. ಅವರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು. ಅವರು  ಹಿಂದೂಸ್ತಾನದಲ್ಲಿ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದ್ದಾರೆ. ಅವರು ಬಡ ಮತ್ತು ದುರ್ಬಲ ವರ್ಗದ ಜನರ ಹಣವನ್ನು ಕಿತ್ತುಕೊಂಡು ಎರಡು ಅಥವಾ ಮೂರು ಶ್ರೀಮಂತರಿಗೆ ನೀಡುತ್ತಿದ್ದಾರೆ ಎಂದು ರಾಹುಲ್‌ ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap