ಬಿಜೆಪಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ: ರಾಹುಲ್ ಗಾಂಧಿ

ನವದೆಹಲಿ:

    ಹಿಂಸಾಚಾರ ಮತ್ತು ದ್ವೇಷವನ್ನು ಹರಡುವ ಬಿಜೆಪಿಯವರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಟೀಕೆಗಳ ವಿರುದ್ಧ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಅಹಮದಾಬಾದ್‌ನಲ್ಲಿರುವ ಗುಜರಾತ್ ಕಾಂಗ್ರೆಸ್ ಪ್ರಧಾನ ಕಚೇರಿಯ ಹೊರಗೆ ಪರಸ್ಪರ ಕಲ್ಲು ತೂರಾಟ ನಡೆಸಿದರು.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಗುಜರಾತ್ ಕಾಂಗ್ರೆಸ್ ಕಚೇರಿಯ ಮೇಲಿನ ಹೇಡಿತನದ ಮತ್ತು ಹಿಂಸಾತ್ಮಕ ದಾಳಿಯು ಬಿಜೆಪಿ ಮತ್ತು ಸಂಘ ಪರಿವಾರದ ಬಗ್ಗೆ ನನ್ನ ಅಭಿಪ್ರಾಯವನ್ನು ಇನ್ನಷ್ಟು ಬಲಪಡಿಸುತ್ತದೆ. ಹಿಂಸೆ ಮತ್ತು ದ್ವೇಷವನ್ನು ಹರಡುವ ಬಿಜೆಪಿ ಜನರಿಗೆ ಹಿಂದೂ ಧರ್ಮದ ಮೂಲ ತತ್ವಗಳು ಅರ್ಥವಾಗುತ್ತಿಲ್ಲ” ಎಂದಿದ್ದಾರೆ. 

   “ಗುಜರಾತ್ ಜನರು ಬಿಜೆಪಿಯ ಸುಳ್ಳನ್ನು ಸ್ಪಷ್ಟವಾಗಿ ತೀರಸ್ಕರಿಸುತ್ತಾರೆ ಮತ್ತು ಬಿಜೆಪಿ ಸರ್ಕಾರಕ್ಕೆ ನಿರ್ಣಾಯಕ ಪಾಠ ಕಲಿಸುತ್ತಾರೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ — ಗುಜರಾತ್ ನಲ್ಲಿ ಇಂಡಿಯಾ ಗೆಲ್ಲಲಿದೆ!”ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

    ಕಾಂಗ್ರೆಸ್ ಕಚೇರಿ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಪಾಲ್ಡಿ ಪ್ರದೇಶದಲ್ಲಿ ಎರಡು ಕಡೆಯ ಹಲವಾರು ಕಾರ್ಯಕರ್ತರು ಮತ್ತು ಮುಖಂಡರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap