ಕಸ್ಬಾ ಪೇಠ್:
ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ರವೀಂದ್ರ ಧಾಂಗೇಕರ್ ಬಿಜೆಪಿ ಅಭ್ಯರ್ಥಿ ಹೇಮಂತ್ ರಸಾನೆ ಅವರಿಗಿಂತ 52,423 ಮತಗಳನ್ನು ಪಡೆದಿದ್ದರೆ ಬಿಜೆಪಿ ಅಭ್ಯರ್ಥಿ 47,419 ಮತಗಳನ್ನು ಪಡೆದಿರುವುದಾಗಿ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಗೆಲುವು ಸಾಧಿಸಿದೆ. ಕಾಂಗ್ರೆಸ್ ಅಭ್ಯರ್ಥಿ ರವೀಂದ್ರ ಧಾಂಗೇಕರ್ ಶೇ. 51 ರಷ್ಟು ಮತಗಳನ್ನು ಗಳಿಸಿ ಭರ್ಜರಿ ಜಯ ಗಳಿಸಿದ್ದಾರೆ.
ಧಂಗೇಕರ್‌ಗೆ ಗೆಲುವು ಸಾಧಿಸಿದ್ದು ತಿಳಿದ ಕೂಡಲೇ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಅಘಾಡಿ ಕಾರ್ಯಕರ್ತರು ಮತ ಎಣಿಕೆ ಕೇಂದ್ರದ ಹೊರಗೆ ಸಂಭ್ರಮಾಚರಣೆ ನಡೆಸಿದ್ದಾರೆ.ಬಿಜೆಪಿ ಶಾಸಕರಾದ ಮುಕ್ತಾ ತಿಲಕ್ ಅವರ ಮರಣದ ಹಿನ್ನೆಲೆಯಲ್ಲಿ ಕಸ್ಬಾ ಪೇಠ್ ಕ್ಷೇತ್ರಕ್ಕೆ ಫೆಬ್ರವರಿ 26 ರಂದು ಮತದಾನ ನಡೆದಿತ್ತು. ಬಿಜೆಪಿ- ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆಯ ಎಂವಿಎ ಮೈತ್ರಿಕೂಟದ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ