ಬೆಂಗಳೂರು:
ಬಿಜೆಪಿಯನ್ನು ಅಧಿಕಾರಕ್ಕೆ ತಂದವರು ನಾವು. ನಮಗೇ ಮೋಸ ಮಾಡಿದರು ಎಂದು ಮಾಜಿ ಸಚಿವ ಆರ್. ಶಂಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅತ್ತ ಕಾಂಗ್ರೆಸ್ ಟಿಕೆಟ್ ಇಲ್ಲ, ಇತ್ತ ಬಿಜೆಪಿ ಟಿಕೆಟ್ ಗಿಟ್ಟಿಲ್ಲ. ಸಮ್ಮಿಶ್ರ ಸರ್ಕಾರದ ವೇಳೆ ಬಂಡಾಯ ಎದ್ದು ಬಂದ ಆರ್. ಶಂಕರ್ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದಾರೆ.
ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಹಾಲಿ ಶಾಸಕ ಅರುಣ್ ಕುಮಾರ್‌ಗೆ ಸಿಕ್ಕ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಆರ್ ಶಂಕರ್, ಎಂ.ಎಲ್.ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ರಾಜೀನಾಮೆ ನೀಡಿ ಪಕ್ಷೇತರರಾಗಿ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಆರ್. ಶಂಕರ್ ಸಚಿವರಾಗಿದ್ದರು, ಮೈತ್ರಿ ಸರ್ಕಾರದ ಬಳಿಕ ಬಿಜೆಪಿಯಿಂದ ಎಂಎಲ್‌ಸಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸಚಿವ ಸ್ಥಾನವನ್ನಂತೂ ನೀಡಿಲ್ಲ. ಟಿಕೆಟ್ ಆದ್ರೂ ಸಿಗುತ್ತೆ ಎಂಬ ಭರವಸೆಯಲ್ಲಿದ್ದ ಶಂಕರ್‌ಗೆ ಭಾರೀ ನಿರಾಸೆಯಾಗಿದೆ.
ಹೀಗಾಗಿ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್.ಶಂಕರ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ