ಸಂಸ್ಕೃತಿ ಬಗ್ಗೆ ಮಾತನಾಡುವವರಿಂದ ಭಾರತ ಮಾತೆಗೆ ಅವಮಾನ: ಡಿ.ಕೆ. ಶಿವಕುಮಾರ್

ಬೆಳಗಾವಿ: 

   ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

   ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು” ಎಂದು ಕಿಡಿಕಾರಿದರು.

  ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, “ಕಾನೂನು ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲ” ಎಂದು ತಿಳಿಸಿದರು. ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, “ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನ ವಿಷಯವನ್ನು ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ನೋಡಿಕೊಳ್ಳುತ್ತದೆ” ಎಂದರು.

Recent Articles

spot_img

Related Stories

Share via
Copy link