ಕಲಬುರಗಿ
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೂರು ಪಕ್ಷಗಳಲ್ಲಿ ರಾಜಕೀಯ ಗರಿಗೆದರಿದ್ದು ಪರಸ್ಪರ ವಾಗ್ದಾಳಿಯೂ ಸಹ ಜೋರಾಗಿಯೇ ಇದೆ, ಸರ್ಕಾರದ ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಕಲಬುರಗಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಯಾವತ್ತೂ ಕೂಡ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದವರಲ್ಲ. ಎರಡು ಬಾರಿ ಕೂಡ ಆಪರೇಷನ್ ಕಮಲದ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಇದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿದ್ದಾರೆ.
ನನ್ನ 45 ವರ್ಷಗಳ ರಾಜಕೀಯ ಜೀವನದಲ್ಲಿ ಆಪರೇಷನ್ ಕಮಲ ಎಂಬ ಹೆಸರು ಕೇಳಿರಲಿಲ್ಲ, ರಾಜ್ಯದಲ್ಲಿ ಈ ಆಪರೇಷನ್ ಕಮಲ ಆರಂಭವಾದುದ್ದು ಯಡಿಯೂರಪ್ಪ ಮತ್ತು ರೆಡ್ಡಿ ಸಹೋದರರರಿಂದ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.