ಶಿವಮೊಗ್ಗ:
ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.